ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯ ; ಅರ್ಜಿ ಸಲ್ಲಿಸಲು ಕೊನೆ ದಿನ-ಸೆ.10; ಹೆಚ್ಚಿನ ಮಾಹಿತಿ ಇಲ್ಲಿದೆ

ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಸ್ವಯಂ ಉದ್ಯೋಗ ವೈಯುಕ್ತಿಕ ಸಾಲ ಯೋಜನೆಯ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಸೆಪ್ಟೆಂಬರ್ 10 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಯೋಜನೆಗೆ ಅರ್ಜಿಯನ್ನು ಕಳೆದ ತಿಂಗಳು ಆಹ್ವಾನಿಸಿದ್ದು, ಆಗ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಆಗಸ್ಟ್ 24, 2022ರವರೆಗೆ ನಿಗದಿ ಪಡಿಸಲಾಗಿತ್ತು.

ಹಿಂದುಳಿದ ವರ್ಗದ ಅರ್ಹ ಅಭ್ಯರ್ಥಿಗಳಿಗೆ ಈ ಸಾಲ ಯೋಜನೆ ಕಲ್ಪಿಸಲಾಗಿದೆ. ಸ್ವಯಂ ಉದ್ಯೋಗ ಮಾಡಲು ಗರಿಷ್ಟ ಎರಡು ಲಕ್ಷ ರೂಪಾಯಿವರೆಗೆ ಇದರಲ್ಲಿ ಸಾಲ ದೊರೆಯುತ್ತದೆ. ಗರಿಷ್ಠ 15% ಸಹಾಯಧನ ಉಳಿಕೆ ಹಣಕ್ಕೆ 4% ಬಡ್ಡಿದರ ಪಾವತಿಸಬೇಕು. ಸಾಲದ ಅವಧಿ 3 ವರ್ಷಗಳಾಗಿರುತ್ತದೆ.

ಘಟಕ ವೆಚ್ಚ ರೂ.50.001/-ರಿಂದ ರೂ.1,00,000 ಗಳವರೆಗೆ ಶೇ.20 ರಷ್ಟು ಗರಿಷ್ಟ ರೂ.20,000/-ಗಳ ಸಹಾಯಧನ ಉಳಿಕೆ ಶೇ.80ರಷ್ಟು ರೂ.80,000/-ಗಳನ್ನು ಶೇ.4ರ ಬಡ್ಡಿ ದರದಲ್ಲಿ ಸಾಲ.

ಘಟಕ ವೆಚ್ಚ ರೂ.1,00,001/-ರಿಂದ ರೂ.2,00,000/ ಗಳವರೆಗೆ ಶೇ.15 ರಷ್ಟು ಕನಿಷ್ಟ ರೂ.20,000/-ಗಳ ಗರಿಷ್ಟ ರೂ.30,000/-ಗಳ ಸಹಾಯಧನ ಉಳಿಕೆ ಶೇ.85ರಷ್ಟು ರೂ.1,70,000/-ಗಳನ್ನು ಶೇ.4ರ ಬಡ್ಡಿ ದರದಲ್ಲಿ ಸಾಲ.

1,00,001/-8o do.2,00,000/ ಗಳವರೆಗೆ ಶೇ.15 ರಷ್ಟು ಕನಿಷ್ಟ ರೂ.20,000/-ಗಳ ಗರಿಷ್ಟ ರೂ.30,000/-ಗಳ ಸಹಾಯಧನ ಉಳಿಕೆ ಶೇ.85ರಷ್ಟು ರೂ.1,70,000/-ಗಳನ್ನು ಶೇ.4ರ ಬಡ್ಡಿ ದರದಲ್ಲಿ ಸಾಲ.

ಸಾಲ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-1, 2A, 3A, 3B ಗೆ ಸೇರಿದವರಾಗಿರಬೇಕು. ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ ಮರಾಠ ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ ಉಳಿದ ಈ ವರ್ಗದವರು ಅರ್ಜಿ ಸಲ್ಲಿಸಬಹುದಾಗಿದೆ.

ಈ ಯೋಜನೆಯಲ್ಲಿ ಕೃಷಿ ಅವಲಂಭಿತ ಚಟುವಟಿಕೆಗಳು, ವ್ಯಾಪಾರ ಚಟುವಟಿಕೆಗಳು ಹಾಗೂ ಸೇವಾ ವಲಯ ಚಟುವಟಿಕೆಗಳಿಗೆ ಸಾಲ ಸೌಲಭ್ಯ ಒದಗಿಸುವುದು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.40,000/-ಗಳು ಪಟ್ಟಣ ಪ್ರದೇಶದವರಿಗೆ ರೂ.55,000/-ಗಳ ಒಳಗಿರಬೇಕು. ಹಾಗೂ ಅರ್ಜಿದಾರರ ವಯಸ್ಸು 18 ರಿಂದ 55 ವರ್ಷದೊಳಗಿರಬೇಕು. ಆತ ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು ಹಾಗೂ ಈಗಾಗಲೇ ನಿಗಮದ ಯೋಜನೆಗಳಲ್ಲಿ ಸೌಲಭ್ಯ ಪಡೆದಿರಬಾರದು.

ಅರ್ಜಿ ಸಲ್ಲಿಸಲು ಶುಲ್ಕ ಪಾವತಿಸುವ ಅಗತ್ಯವಿಲ್ಲ. ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಛೇರಿಯ ಅವಧಿಯಲ್ಲಿ ಉಚಿತವಾಗಿ ಆನೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳ ವಿವರಗಳನ್ನು ಈ ಕಛೇರಿಯಲ್ಲಿಯೇ ತಿಳಿಯಬಹುದು.

ಅಪ್ಲಿಕೇಶನ್ ಸಲ್ಲಿಸಲು ಬೇಕಾದ ದಾಖಲೆಗಳು:
ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಸ್ವಯಂ ಉದ್ಯೋಗ ಕುರಿತ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಇತರೆ.

ಈ ಯೋಜನೆಯಡಿಯಲ್ಲಿ ಸೌಲಭ್ಯ ಒದಗಿಸಲು ಸುವಿಧಾ ತಂತ್ರಾಂಶದಲ್ಲಿ ಆನೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾ‌ರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.

ಅರ್ಜಿ ಸಲ್ಲಿಸಲು ಸುವಿಧಾ ವೆಬ್ ಸೈಟ್ ವಿಳಾಸ : https://suvidha.karnataka.gov.in

ಇತರೆ ಹೆಚ್ಚಿನ ಮಾಹಿತಿಗೆ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವೆಬೈಟ್ : https://dbcdc.karnataka.gov.in

ನಿಗಮದ ಸಹಾಯವಾಣಿ ಸಂಖ್ಯೆ : 080-22374832

Leave A Reply

Your email address will not be published.