ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಕಾಲ ಮಳೆಯಾಗುವ ಸಾಧ್ಯತೆಯಿದ್ದು,ಕಳೆದೊಂದು ವಾರದಿಂದ ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಿದ್ದಿದೆ. 15 ಜಿಲ್ಲೆಗಳಲ್ಲಿ ಯೆಲ್ಲೋ ಆಲರ್ಟ್‌ ಘೋಷಣೆ ಮಾಡಲಾಗಿದೆ.

ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಕೋಲಾರ, ತುಮಕೂರು, ಚಾಮರಾಜನಗರ, ಮೈಸೂರು, ಮಂಡ್ಯದಲ್ಲಿ ವಾಡಿಕೆಗಿಂತ ಅಧಿಕ ಸುರಿದಿದೆ. ಕರಾವಳಿ ಮತ್ತು ಮಲೆನಾಡಿನ ಭಾಗಗಳಲ್ಲಿ ವಾಡಿಕೆಯಷ್ಟೇ ಬಿದ್ದರೆ, ಉತ್ತರ ಒಳನಾಡಿನಲ್ಲಿ ವಾಡಿಕೆಗಿಂತ ತುಸು ಹೆಚ್ಚು ಮಳೆಯಾಗಿದೆ. ಅಲ್ಲದೆ, ಆ.1ರಿಂದ ಆ.29ರವರೆಗೆ ರಾಜ್ಯಾದ್ಯಂತ 211 ಮಿಮೀ ಮಳೆ ಬದಲಾಗಿ 281 ಮಿಮೀ ಮಳೆಯಾಗಿದ್ದು, ಶೇ.33 ವಾಡಿಕೆಗಿಂತ ಹೆಚ್ಚು ಸುರಿದಿದೆ.

ಭಾನುವಾರ ರಾತ್ರಿಯಿಂದ ಸೋಮವಾರದವರೆಗೆ ಭಾಗಮಂಡಲದಲ್ಲಿ ಅತಿ ಹೆಚ್ಚು 21 ಸೆಂಮೀ ಮಳೆಯಾದರೆ, ಗದಗದ ಶಿರಹಟ್ಟಿ ಮತ್ತು ಲಕ್ಷ್ಮೇಶ್ವರದಲ್ಲಿ ತಲಾ 11 ಸೆಂ.ಮೀ., ಹಾವೇರಿಯ ಸವಣೂರಿನಲ್ಲಿ 9, ಉತ್ತರ ಕನ್ನಡದ ಬನವಾಸಿ ಮತ್ತು ಚಾಮರಾಜನಗರದ ಕೊಳ್ಳೆಗಾಲದಲ್ಲಿ ತಲಾ 7 ಸೆಂ.ಮೀ. ಮಳೆ ಸುರಿದಿದೆ.

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನದಲ್ಲಿ ಆ.30ರಿಂದ ಸೆ.1ರವರೆಗೆ, ಕಲಬುರಗಿ, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಗದಗ, ಹಾವೇರಿ, ದಾವಣಗೆರೆಯಲ್ಲಿ ಮುಂದಿನ 24 ಗಂಟೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.

ಚಾಮರಾಜನಗರದಲ್ಲಿ ಮುಂದಿನ 48 ಗಂಟೆ ಮತ್ತು ಮಂಡ್ಯ ಆ.31ರಂದು ಯೆಲ್ಲೋ ಅಲರ್ಟ್ ಇರಲಿದೆ. ಈಗಾಗಲೇ ಮಳೆಯ ಆರ್ಭಟಕ್ಕೆ ಜನರು ತತ್ತರಿಸಿಹೋಗಿದ್ದು, ಎಚ್ಚರಿಕೆ ವಹಿಸೋದಕ್ಕೆ ಈಗಾಗಲೇ ಮನವಿ ಮಾಡಲಾಗಿದೆ.

Leave A Reply

Your email address will not be published.