ಆ.31 ರಂದು ಪ್ರಾಣಿವಧೆ ಮಾಂಸ ಮಾರಾಟ ನಿಷೇಧ…!
ಆಗಸ್ಟ್ 31 ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗಣೇಶ ಚತುರ್ಥಿಯ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿದೆ. ಬಿಬಿಎಂಪಿ ವ್ಯಾಪ್ತಿಯ ಎಲ್ಲ ಪ್ರದೇಶಗಳಿಗೂ ಈ ನಿಷೇಧ ಅನ್ವಯವಾಗಲಿದೆ. ಈ ಬಗ್ಗೆ ಬಿಬಿಎಂಪಿ ಸುತ್ತೋಲೆ ಹೊರಡಿಸಿದೆ.
ಮಾರ್ಚ್ 31 ರ ಬುಧವಾರದಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಈ ತಿಂಗಳ ಕೃಷ್ಣ ಜನ್ಮಾಷ್ಟಮಿಯಂದು ಕೂಡ ಮಾಂಸ ಮಾರಾಟ ಮತ್ತು ಪ್ರಾಣಿಗಳ ಹತ್ಯೆಯನ್ನು ನಿಷೇಧಿಸಿ ಬಿಬಿಎಂಪಿ ಸುತ್ತೋಲೆ ಹೊರಡಿಸಿತ್ತು.
ಗಣೇಶ ಮೂರ್ತಿ ಕೂರಿಸಲು ಸೂಕ್ಷ್ಮ, ಅತಿ ಸೂಕ್ಷ್ಮ, ಸಾಮಾನ್ಯ ಏರಿಯಾ ಎಂದು 3 ರೀತಿ ಪ್ರದೇಶಗಳನ್ನು ಗುರುತಿಸಲಾಗಿದೆ. ಚಾಮರಾಜಪೇಟೆ, ಚಂದ್ರಾಲೇಔಟ್, ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ, ಗೋವಿಂದಪುರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದೆ. 24 ಗಂಟೆಯೂ ಇಂತಹ ಏರಿಯಾಗಳಲ್ಲಿ ಭದ್ರತೆ ಇರಲಿದ್ದು, 3 ಪಾಳಿಯಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತಿದೆ.
ಬೆಂಗಳೂರಿನಲ್ಲಿ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಆಯೋಜಕರು ಗಣೇಶ ಪ್ರತಿಷ್ಟಾಪನೆಗೆ ಬಿಬಿಎಂಪಿಯ ಏಕಗವಾಕ್ಷಿ ಅನುಮತಿಯನ್ನು ಕಡ್ಡಾಯವಾಗಿ ಪಡೆದಿರಬೇಕು ಎಂದು ತಿಳಿಸಿದೆ.