ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳಿಗೆ ಮಹತ್ವದ ಸುದ್ದಿ – ರಾಜ್ಯ ಸರಕಾರ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಬಯೋಮೆಟ್ರಿಕ್‌ ಹಾಜರಾತಿ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ
ALBAS ನಲ್ಲಿ ಕಡ್ಡಾಯವಾಗಿ ಹಾಜರಾತಿ ದಾಖಲಿಸಲು
ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸೂಚಿಸಲಾಗಿತ್ತು. ಅದಾಗ್ಯೂ ಬಹುತೇಕ ಸಿಬ್ಬಂದಿಗಳು ಹಾಜರಾತಿಯನ್ನು ದಾಖಲಿಸದೇ ಇರುವುದು ಗಮನಕ್ಕೆ ಬಂದಿದ್ದು, ಆದ್ದರಿಂದ ಕಚೇರಿಯ ವೇಳಾಪಟ್ಟಿಯಂತೆ ಬೆಳಗ್ಗೆ 10 ಗಂಟೆಗೆ ಮತ್ತು ಸಂಜೆ 5.30 ಕ್ಕೆ AEBAS ನಲ್ಲಿ ಕಡ್ಡಾಯವಾಗಿ ಹಾಜರಾತಿ ದಾಖಲಿಸಬೇಕು. ದಾಖಲಿಸದಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಸೆ. 6ಕ್ಕೆ ವೇತನ ಆಯೋಗ’ ಘೋಷಣೆ ಸಾಧ್ಯತೆ

ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರಿ ವೇತನ ಆಯೋಗವನ್ನು ಸೆ. 6 ರಂದು ಘೋಷಣೆ ಮಾಡುವ ಸಾಧ್ಯತೆಗಳಿವೆ.

ಸೆ.6 ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸರ್ವೋತ್ತಮ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರ್ಕಾರಿ ನೌಕರರಿಗೆ ವೇತನ ಆಯೋಗ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಟ್ಟದ ನಿವೃತ್ತಿ ಅಧಿಕಾರಿಯೊಬ್ಬರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುತ್ತದೆ. ಪ್ರಧಾನ ಕಾರ್ಯದರ್ಶಿ ಮಟ್ಟದ ಅಧಿಕಾರಿಯನ್ನು ಆಯೋಗದ ಸದಸ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗುತ್ತದೆ. ಆಯೋಗದ ವರದಿ ಬಂದ ನಂತರ ಮುಂದಿನ ಬಜೆಟ್ ನಲ್ಲಿ ವೇತನ ಆಯೋಗದ ಶಿಫಾರಸು ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

Leave A Reply

Your email address will not be published.