ರಾಜ್ಯದ ‘ಪದವಿ ಪೂರ್ವ ಕಾಲೇಜು’ಗಳ ‘ಮದ್ಯಂತರ ರಜೆ’ ವಿಸ್ತರಿಸಿ ಸರ್ಕಾರ ಆದೇಶ | ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ
ರಾಜ್ಯ ಸರ್ಕಾರದಿಂದ 2022-23ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಕಾಲೇಜುಗಳ (Pre University College ) ಮಧ್ಯಂತರ ರಜೆಯನ್ನು ವಿಸ್ತರಣೆ ಮಾಡಿ ಆದೇಶಿಸಿದೆ. ಈ ಮೂಲಕ ಪದವಿ ಪೂರ್ವ ಕಾಲೇಜು ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ನೀಡಿದೆ.
ಅಲ್ಲದೇ ಅಕ್ಟೋಬರ್ 14ರಿಂದ ಕಾಲೇಜುಗಳನ್ನು ಪುನರಾರಂಭಿಸೋದಕ್ಕೆ ಸೂಚಿಸಲಾಗಿದೆ.ಈ ಸಂಬಂಧ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ಪದವಿಪೂರ್ವ ಶಿಕ್ಷಣ ಇಲಾಖೆಯ 2022-23ನೇ ಶೈಕ್ಷಣಿಕ ಸಾಲಿನ ದಾಖಲಾತಿ ಮಾರ್ಗಸೂಚಿಯಲ್ಲಿ ಮಧ್ಯಂತರ ರಜೆಯನ್ನು ದಿನಾಂಕ 01- 10-2022 ರಿಂದ 12-10-2022ರವರೆಗೆ ನಿಗದಿ ಪಡಿಸಲಾಗಿತ್ತು ಎಂದು ತಿಳಿಸಿದ್ದಾರೆ.
ಇದೀಗ ದಿನಾಂಕ 13-10-2022ರಂದು ಒಂದು ದಿನ ಹೆಚ್ಚುವರಿಯಾಗಿ ರಜೆಯನ್ನು ವಿಸ್ತರಿಸಲಾಗಿದೆ. ಹೀಗಾಗಿ ಎಲ್ಲಾ ಪದವಿ ಪೂರ್ವ ಕಾಲೇಜುಗಳನ್ನು ದಿನಾಂಕ 14-10 2022ರಿಂದ ಮರು ಪ್ರಾರಂಭಿಸುವಂತೆ ಸೂಚಿಸಿದ್ದಾರೆ.
ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ. 2ರ ಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ಇಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಗ್ರಾಮೀಣ ಕ್ರೀಡೋತ್ಸವ ಹಾಗೂ ಯೋಗಾಥಾನ್ ಗೆ ಚಾಲನೆ ನೀಡಿ ಮಾತನಾಡಿದ ಅವರು, ಮುಂದಿನ ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾಗವಹಿಸಲು ರಾಜ್ಯದ ಆಯ್ದ 75 ಕ್ರೀಡಾಪಟುಗಳಿಗೆ ವಿಶ್ವಮಟ್ಟದ ತರಬೇತಿ ನೀಡಲಾಗುತ್ತಿದೆ. ಇವರಲ್ಲಿ ಹಲವರು ಒಲಂಪಿಕ್‌ಸ್‌ನಲ್ಲಿ ಪದಕಗಳನ್ನು ಗೆಲ್ಲಬೇಕೆಂಬುದು ಸರ್ಕಾರದ ಗುರಿಯಾಗಿದೆ.
ಗ್ರಾಮೀಣ ಮಟ್ಟದಲ್ಲಿಯೂ ಕ್ರೀಡಾ ಸಾಧನೆಗಳಾಗಬೇಕು ಹಾಗೂ ಗ್ರಾಮೀಣ ಕ್ರೀಡೆಗಳನ್ನು ಸರ್ಕಾರದ ವತಿಯಿಂದ ವ್ಯವಸ್ಥಿತವಾಗಿ ನಡೆಸುವ ಉದ್ದೇಶದಿಂದ ಗ್ರಾಮೀಣ ಕ್ರೀಡಾಕೂಟವನ್ನು ಪ್ರಾರಂಭಿಸಲಾಗಿದೆ. ಕಬ್ಬಡಿ, ಕೋಕೋ, ಕಂಬಳ, ಎತ್ತಿನಗಾಡಿ ಸ್ಪರ್ಧೆ, ಹೀಗೆ ಹಲವು ಕ್ರೀಡೆಗಳು ಗ್ರಾಮೀಣ ಪ್ರದೇಶದ ಸೊಗಡನ್ನು ಸೂಸುತ್ತದೆ. ಗ್ರಾಮಪಂಚಾಯತಿ, ತಾಲ್ಲೂಕು,ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಕ್ರೀಡೆಗಳು ನಡೆಯುತ್ತವೆ. ಗ್ರಾಮಮಟ್ಟದಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗುತ್ತಿದೆ ಎಂದು ಹೇಳಿದ್ದಾರೆ.