KCET ಸೀಟ್ ಮ್ಯಾಟ್ರಿಕ್ಸ್ ಸೆ.5 ಕ್ಕೆ | ಕೌನ್ಸೆಲಿಂಗ್ 15 ಕ್ಕೆ?

ಸಿಇಟಿ -2022ರ ಫಲಿತಾಂಶ ಪ್ರಕಟವಾಗಿ ತಿಂಗಳಾದರೂ ಪ್ರವೇಶ ಪ್ರಕ್ರಿಯೆ ಆರಂಭ ಮಾಡಿದಿರುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ. ಹಾಗೆನೇ ಇನ್ನೊಂದು ಕಡೆ ಖಾಸಗಿ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಲ್ಲಿ ಈಗಾಗಲೇ ಕೆಲವೆಡೆ ತರಗತಿಗಳನ್ನು ಆರಂಭಿಸುವ ಪ್ರಕ್ರಿಯೆ ನಡೆಯುತ್ತಾ ಇದೆ.

ಹಾಗಾಗಿ ಎಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸೀಟು ಹಂಚಿಕೆ ಸಂಬಂಧ ಸೆ.5ರೊಳಗೆ ಸೀಟ್ ಮ್ಯಾಟ್ರಿಕ್ಸ್ ಪ್ರಕಟಿಸುವ ಸಾಧ್ಯತೆ ಇದೆ.
ಸೆ.15ರ ವೇಳೆಗೆ ಕೌನ್ಸೆಲಿಂಗ್ ಆರಂಭಿಸುವ ಸಾಧ್ಯತೆಗಳಿವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಗಳು ತಿಳಿಸಿವೆ.

ಆ.24ರಿಂದ 26ರ ವರೆಗೆ ನಡೆದ ವೈದ್ಯಕೀಯ ತಪಾಸಣೆಗೆ ಗೈರು ಹಾಜರಾದ ವಿಕಲಚೇತನ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲಾಗಿದ್ದು, ಸೆ.6ರಂದು ಬೆಂಗಳೂರಿನ ಪರೀಕ್ಷಾ ಪ್ರಾಧಿಕಾರ ಕಚೇರಿಯಲ್ಲಿ ತಪಾಸಣೆ ನಡೆಸಲಾಗುತ್ತದೆ. ಅಂದು ಬೆಳಗ್ಗೆ 9 ಗಂಟೆಗೆ ಸಂಬಂಧಿಸಿದ ದಾಖಲಾತಿಗಳೊಂದಿಗೆ ಹಾಜರಾಗುವಂತೆ ಕೆಇಎ ತಿಳಿಸಿದೆ.

ಖಾಸಗಿ ಕಾಲೇಜುಗಳು ಸೆ.4ರ ಒಳಗೆ ಇನ್‌ಟೇಕ್ ವಿವರಗಳನ್ನು ಕೆಇಎ ಗೆ ಸಲ್ಲಿಸಲಿವೆ. ಸೆ.5 ಅಥವಾ 6ರಂದು ಸೀಟ್ ಮ್ಯಾಟ್ರಿಕ್ಸ್ ಬಿಡುಗಡೆ ಮಾಡಲಾಗುತ್ತದೆ. ಸೆ.15ರ ವೇಳೆಗೆ ಮೊದಲ ಸುತ್ತಿನ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಆರಂಭಿಸುವುದಾಗಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದರು. ಈ ಕುರಿತು ಮುಂದಿನ 3-4 ದಿನಗಳಲ್ಲಿ ಸ್ಪಷ್ಟತೆ ಸಿಗಲಿದೆ. ಹಾಗೆನೇ ಆದಷ್ಟು ಈ ಕುರಿತು ಬೇಗ ಪ್ರಕ್ರಿಯೆ ಆರಂಭ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

Leave A Reply

Your email address will not be published.