ಯುವಕನೊಬ್ಬ ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆಯೊಂದು ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಿಂದ ತೀವ್ರ ರಕ್ತಸ್ರಾವವಾಗಿ ಹಸು ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ. ಈ ಕುಕೃತ್ಯ ಎಸಗಿದ ಕಾಮುಕ ಪೊಲೀಸರ ಅತಿಥಿಯಾಗಿದ್ದಾನೆ.
ಅತ್ಯಾಚಾರ ಎನ್ನುವುದು ಮನುಷ್ಯನ ಮೇಲೆ ಮಾತ್ರ ಅಲ್ಲ, ಪ್ರಾಣಿಗಳ ಮೇಲೆ ಕೂಡಾ ನಡೆಯುತ್ತದೆ. ಮನುಷ್ಯನ ಈ ಅಸಹ್ಯ ವರ್ತನೆ ನಿಜಕ್ಕೂ ಅಸಹನೀಯ. ಹೌದು, ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರ ಮಾಡಿದ ಪ್ರಕರಣದಲ್ಲಿ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ. 29 ವರ್ಷದ ವ್ಯಕ್ತಿಯನ್ನು ಬಂಧಿಸಿ ಜೈಲಿಗೆ ಹಾಕಲಾಗಿದೆ. ಈ ಘಟನೆ ಕೊಲ್ಕೊತ್ತಾದಲ್ಲಿ ನಡೆದಿದೆ.
ಹಸುವಿನ ಮಾಲೀಕರು ನೀಡಿದ ದೂರಿನ ಆರೋಪದ ಆಧಾರದ ಮೇಲೆ ಪ್ರದ್ಯುತ್ ಭೂಯಾನನ್ನು ಬಂಧಿಸಲಾಗಿದೆ. ಆರೋಪಿ ಪ್ರದ್ಯುತ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಂತರ ಮಂಗಳವಾರ ಕಾಕದ್ವೀಪ ಉಪವಿಭಾಗೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರದ್ಯುತ್ ವಿರುದ್ಧ ಲೆಕ್ಕವಿಲ್ಲದಷ್ಟು ಆರೋಪಗಳಿವೆ. ಈತ ಈ ಹಿಂದೆ ಮೇಕೆಗಳು, ವಾಹನಗಳು ಮತ್ತು ಹೊಲಗಳಲ್ಲಿ ತರಕಾರಿಗಳನ್ನು ಕಳ್ಳತನ ಮಾಡಿದ್ದಾನೆ ಎಂಬ ಅಪವಾದ ಹೊತ್ತಿದ್ದಾನೆ ಕೂಡಾ.
ಈತ ಈ ಅಸಹ್ಯ ಕೃತ್ಯವನ್ನು ಮಧ್ಯರಾತ್ರಿ ಹಸುಗಳನ್ನು ಕಟ್ಟಿ ಹಾಕಿದ ಸ್ಥಳಕ್ಕೆ ತೆರಳಿ ಮಾಡಿದ್ದಾನೆ. ಗರ್ಭಿಣಿ ಹಸುವಾದ್ದರಿಂದ ಹಸು ಮೃತಪಟ್ಟಿದೆ. ಈತ ಈ ಹಿಂದೆಯೂ ಹಲವು ಅಪರಾಧಗಳಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿರುವುದಾಗಿ ತಿಳಿದು ಬಂದಿದೆ.