ಇನ್ಮುಂದೆ ಗ್ರಾಮ ಒನ್ ಕೇಂದ್ರಗಳಲ್ಲೂ ಪಡೆಯಬಹುದು ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್!
ಸಾರ್ವಜನಿಕರಿಗೆ ಉಚಿತ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ್ ಕಾರ್ಡ್ ಆರಂಭಿಸಿದೆ. ಇದೀಗ ಗ್ರಾಮ ಒನ್ ಕೇಂದ್ರಗಳನ್ನು ಸಂಪರ್ಕಿಸಿ ಉಚಿತವಾಗಿ ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗಳನ್ನು ಪಡೆದುಕೊಳ್ಳಬಹುದು.
ಆಯುಷ್ಮಾನ್ ಭಾರತ ಹೆಲ್ತ್ ಕಾರ್ಡ್ ಹೊಂದಿದವರು ಆಯ್ದ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಯಲ್ಲಿ ಬಿ.ಪಿ.ಎಲ್.ಕಾರ್ಡ ಹೊಂದಿದವರಿಗೆ 5 ಲಕ್ಷ ರೂ.ವರೆಗೆ ಮತ್ತು ಎ.ಪಿ.ಎಲ್. ಕಾರ್ಡ ಹೊಂದಿದವರಿಗೆ 1.5 ಲಕ್ಷ ರೂ.ಗಳವರೆಗೆ ಉಚಿತವಾಗಿ ಚಿಕಿತ್ಸೆ ಪಡೆಯಬಹುದು.
ಭಾರತ ಸರ್ಕಾರವು ಸಾರ್ವಜನಿಕ ಆರೋಗ್ಯದ ಮಾಹಿತಿಯನ್ನು ಡಿಜಿಟಲೀಕರಣಗೊಳಿಸಿ ಒಬ್ಬ ವ್ಯಕ್ತಿಯ ಸಂಪೂರ್ಣ ಆರೋಗ್ಯದ ಮಾಹಿತಿಯನ್ನು ಒಂದೇ ಸೂರಿನಡಿ ದೊರಕಿಸಿ, ಆರೋಗ್ಯದ ಸೌಲಭ್ಯಗಳು ಸುಲಭವಾಗಿ ದೊರಕುವಂತೆ ಮಾಡುವ ಮಹತ್ತರ ಯೋಜನೆಯಾದ ಆಯುಷ್ಮಾನ ಭಾರತ ಹೆಲ್ತ್ ಆಕೌಂಟ್ ಕಾರ್ಡ್ ಯೋಜನೆಯನ್ನು ಆರಂಭಿಸಿರುತ್ತದೆ.
ಚಿಕಿತ್ಸೆ ಮಾಹಿತಿಯೂ ಸಹ ದೇಶದ ಯಾವುದೇ ಭಾಗದಲ್ಲಿ ಆನ್‌ಲೈನ್ ಮೂಲಕ ಪಡೆಯಬಹುದಾಗಿರುತ್ತದೆ. ಕಾರ್ಡ್ ನೊಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕರು ಹತ್ತಿರದ ಗ್ರಾಮ ಒನ್ ಕೇಂದ್ರಗಳನ್ನು ಸಂಪರ್ಕಿಸಿ, ಉಚಿತವಾಗಿ ಆಯುಷ್ಮಾನ್ ಭಾರತ ಹೆಲ್ತ್ ಕಾರ್ಡಗಳನ್ನು ಪಡೆದುಕೊಳ್ಳಬಹುದು.
ಈ ಯೋಜನೆಯನ್ನು ಕೇಂದ್ರ ಸರ್ಕಾರ ನಿರ್ವಹಿಸುತ್ತದೆ, ಅದರ ಎಲ್ಲಾ ಹಣವನ್ನು ಸರ್ಕಾರವೇ ನೀಡುತ್ತದೆ. ಈ ಯೋಜನೆಯ ಅಡಿಯಲ್ಲಿ, ನೀವು ಆಯುಷ್ಮಾನ್ ಯೋಜನೆಯಲ್ಲಿ ಪಟ್ಟಿ ಮಾಡಲಾದ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳ ಲಾಭವನ್ನು ಪಡೆಯಬಹುದು. ಈ ಯೋಜನೆಯಡಿ, 5 ಲಕ್ಷ ರೂ.ವರೆಗಿನ ಚಿಕಿತ್ಸೆಯ ಸೌಲಭ್ಯವನ್ನು ಉಚಿತವಾಗಿ ನೀಡಲಾಗುತ್ತದೆ. ಕುಟುಂಬವು ಚಿಕ್ಕದಾಗಿರಲಿ ಅಥವಾ ದೊಡ್ಡದಾಗಿರಲಿ, ಈ ಯೋಜನೆಯ ಲಾಭವನ್ನು ಸಮಾನವಾಗಿ ನೀಡಲಾಗುತ್ತದೆ.