ರಾಜ್ಯದ ಈ ಜಿಲ್ಲೆಯಲ್ಲಿ ಈ ದಿನಗಳಂದು ಮದ್ಯ ಮಾರಾಟ ಸಂಪೂರ್ಣ ನಿಷೇಧ

ಗೌರಿ ಗಣೇಶ ಹಬ್ಬ ಹಾಗೂ ಗಣಪನ ವಿಸರ್ಜನಾ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯುವ ಕಾರಣ, ರಾಜ್ಯದ ಈ ಜಿಲ್ಲೆಯಲ್ಲಿ 3 ದಿನ ಮದ್ಯ ಮಾರಾಟ ನಿಷೇಧಗೊಳಿಸಲಾಗಿದೆ.

 

ನಿನ್ನೆ ಗೌರಿ ಗಣೇಶ ಹಬ್ಬವನ್ನು ಜಿಲ್ಲೆಯಾದ್ಯಂತ ಆಚರಿಸಲಾಗಿದೆ. ಹಾಗಾಗಿ ಸೆ.02 ಹಾಗೂ 04 ಮತ್ತು 08 ರಂದು ದಾವಣಗೆರೆ ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮವಾಗಿ ಬೆ.6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸರಬರಾಜನ್ನು ನಿಷೇಧಗೊಳಿಸಲು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಆದೇಶಿಸಿರುತ್ತಾರೆ.

ಗಣೇಶ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಸಂಬಂಧ ಗಣೇಶ ಮೂರ್ತಿಗಳನ್ನು ಮೆರವಣೆಗೆ ಮುಖಾಂತರ ವಿಸರ್ಜನಾ ಸ್ಥಳಗಳಿಗೆ ತೆಗೆದುಕೊಂಡು ಹೋಗಲಿದ್ದು, ಈ ಸಂಧರ್ಭದಲ್ಲಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ವಹಿಸುವ ಸಲುವಾಗಿ, ಮದ್ಯ ಮಾರಾಟ ಮತ್ತು ಸರಬರಾಜನ್ನು ನಿಷೇಧಗೊಳಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave A Reply

Your email address will not be published.