ಕೇಂದ್ರ ಲೋಕ ಸೇವಾ ಆಯೋಗ(UPSC)ದಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ-37, ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನ

ಕೇಂದ್ರ ಲೋಕ ಸೇವಾ ಆಯೋಗದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆಯ ಹೆಸರು: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC)
ಹುದ್ದೆಯ ಹೆಸರು: ಸಹಾಯಕ ನಿರ್ದೇಶಕರು, ಹಿರಿಯ ಶ್ರೇಣಿ
ಹುದ್ದೆಗಳ ಸಂಖ್ಯೆ: 37
ಉದ್ಯೋಗ ಸ್ಥಳ: ಅಖಿಲ ಭಾರತ
ಸಂಬಳ: UPSC ನಿಯಮಗಳ ಪ್ರಕಾರ

ಹುದ್ದೆ, ಹುದ್ದೆ ಸಂಖ್ಯೆ, ವಿದ್ಯಾರ್ಹತೆ , ವಯೋಮಿತಿ:
ಸಹಾಯಕ ನಿರ್ದೇಶಕ 2 ಕಾನೂನು ಪದವಿ ಗರಿಷ್ಠ 40 ವರ್ಷ
ಉಪನಿರ್ದೇಶಕರು 4 ಪದವಿ ಗರಿಷ್ಠ 40 ವರ್ಷ
ವೈಜ್ಞಾನಿಕ ಅಧಿಕಾರಿ 1 ಎಲೆಕ್ಟಿಕ್​, ಮೆಕಾನಿಕ್​, ಫಿಸಿಕ್ಸ್​ನಲ್ಲಿ ಪದವಿ ಗರಿಷ್ಠ 33 ವರ್ಷ
ಫೋಟೋಗ್ರಾಫಿಕ್ ಅಧಿಕಾರಿ 1 ಪದವಿ ಗರಿಷ್ಠ 33 ವರ್ಷ
ಹಿರಿಯ ಫೋಟೋಗ್ರಾಫಿಕ್ ಅಧಿಕಾರಿ ​ 1 ಬಿಇ, ಬಿಟೆಕ್ ಗರಿಷ್ಠ 35 ವರ್ಷ
ಜೂನಿಯರ್ ಸೈಂಟಿಫಿಕ್ ಆಫೀಸರ್ (ಭೌತಶಾಸ್ತ್ರ) 1 ಡಿಪ್ಲೊಮಾ, ಭೌತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಗರಿಷ್ಠ 30 ವರ್ಷ
ಜೂನಿಯರ್ ಸೈಂಟಿಫಿಕ್ ಆಫೀಸರ್ (ನ್ಯೂಟ್ರಾನ್) 1 ಡಿಪ್ಲೊಮಾ, ರಾಸಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಗರಿಷ್ಠ 30 ವರ್ಷ
ಭಾರತೀಯ ಮಾಹಿತಿ ಸೇವೆಯ ಹಿರಿಯ ಶ್ರೇಣಿ 22 ಪತ್ರಿಕೋದ್ಯಮದಲ್ಲಿ ಪದವಿ, ಡಿಪ್ಲೊಮಾ ಗರಿಷ್ಠ 30 ವರ್ಷ
ಪ್ರಾಂಶುಪಾಲರು 1 ಸ್ನಾತಕೋತ್ತರ ಪದವಿ ಗರಿಷ್ಠ 30 ವರ್ಷ
ನಿರ್ದೇಶಕ 1 ಭೂಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಗರಿಷ್ಠ 50 ವರ್ಷ
ಕಾರ್ಯನಿರ್ವಾಹಕ ಇಂಜಿನಿಯರ್/ಸರ್ವೇಯರ್ ಆಫ್ ವರ್ಕ್ಸ್ (ಸಿವಿಲ್) 2 ಸಿವಿಲ್​ನಲ್ಲಿ ಬಿಇ, ಬಿಟೆಕ್ ಗರಿಷ್ಠ 50 ವರ್ಷ

ಅರ್ಜಿ ಶುಲ್ಕ:
ಪ.ಜಾ, ಪ.ಪಂ, ವಿಕಲಚೇತನ, ಮಹಿಳಾ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು: 25 ರೂ

ಪಾವತಿ ವಿಧಾನ: ಆನ್​ಲೈನ್​

ಅರ್ಜಿ ಸಲ್ಲಿಕೆ: ಆನ್​ಲೈನ್​

ಆಯ್ಕೆ ಪ್ರಕ್ರಿಯೆ:
ನೇಮಕಾತಿ ಪರೀಕ್ಷೆ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12-08-2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01-ಸೆಪ್ಟೆಂಬರ್-2022

ಸಂಪೂರ್ಣವಾಗಿ ಸಲ್ಲಿಸಿದ ಆನ್ಲೈನ್ ಅರ್ಜಿಯನ್ನು ಮುದ್ರಿಸಲು ಕೊನೆಯ ದಿನಾಂಕ: 02-ಸೆಪ್ಟೆಂಬರ್-2022

ಅರ್ಜಿ ಸಲ್ಲಿಕೆ ಪ್ರಕ್ರಿಯೆ:
*ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ
*ಆನ್‌ಲೈನ್ ಮೋಡ್ ಮೂಲಕ ನಿಗದಿತ ಅರ್ಜಿಯನ್ನು ಡೌನ್​ ಲೋಡ್​ ಮಾಡಿ. ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.
*ಆನ್‌ಲೈನ್‌ನಲ್ಲಿ ಲಾಗ್​ ಇನ್​ ಆಗಿ. ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
*ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಮೇಲಿನ ಇಮೇಲ್​ ವಿಳಾಸಕ್ಕೆ ಅರ್ಜಿ ಸಲ್ಲಿಸಿ.

ಅಧಿಕೃತ ವೆಬ್‌ಸೈಟ್: upsc.gov.in

Leave A Reply

Your email address will not be published.