ಪ್ಲಾಸ್ಟಿಕ್ ಕವರಿನಲ್ಲಿ ಮಗುವನ್ನು ಹಾಕಿ, ಮರಕ್ಕೆ ನೇತು ಹಾಕಿದ ಪ್ರಕರಣಕ್ಕೆ ಸಿಕ್ಕಿತು ಬಿಗ್ ಟ್ವಿಸ್ಟ್ !!!

ಇತ್ತೀಚೆಗೆ ನವಜಾತ ಶಿಶುವೊಂದನ್ನು ಚೀಲವೊಂದರಲ್ಲಿ ಮರಕ್ಕೆ ನೇತು ಹಾಕಿ ಪತ್ತೆಯಾದ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಅಶೋಕನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ನೇರಸಾ ಗ್ರಾಮದ ಅಂಗನವಾಡಿ ಕೇಂದ್ರದ ಬಳಿ ನಡೆದಿತ್ತು.

 

ಈಗ ಈ ಪ್ರಕರಣಕ್ಕೆ ಟ್ವಿಸ್ಟ್ ಪಡೆದಿದೆ. ಪೊಲೀಸರು ಈ ಪ್ರಕರಣ ಭೇದಿಸಿದ್ದಾರೆ. ಇದೊಂದು ಅಪ್ರಾಪ್ತರ ಪ್ರೇಮ ಪ್ರಕರಣ ಎಂದು ಬಯಲಿಗೆ ಬಂದಿದೆ. ಹೌದು, 19 ವರ್ಷದ ಯುವಕ ಮತ್ತು 16 ವರ್ಷದ ಬಾಲಕಿಯ ಮಗು ಇದಾಗಿದ್ದು, ಇವರೇ ಪೋಷಕರು ಎಂದು ಬಯಲಾಗಿದೆ. ಹಾಗಾಗಿ ಈತ ಮದುವೆ ಆಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿದ್ದ ಆರೋಪ ಈಗ ಯುವಕನ ವಿರುದ್ಧ ಕೇಳಿಬಂದಿದೆ.

ಈ ಘಟನೆ ನಡೆದು ವಾರದ ಬಳಿಕ ಖಾನಾಪುರ ಠಾಣೆ ಪೊಲೀಸರು ಈ ಪ್ರಕರಣವನ್ನು ಬಯಲಿಗೆಳೆದಿದ್ದಾರೆ. ಸದ್ಯ ಯುವಕನನ್ನು ಬಂಧಿಸಿರುವ ಪೊಲೀಸರು ಅಪ್ರಾಪ್ತ ಯುವತಿಯನ್ನು ರಕ್ಷಿಸಿದ್ದಾರೆ.

ಬಂಧಿತ ಯುವಕ ನೆರಸಾ ಗೌಳಿವಾಡ ಗ್ರಾಮದ ಮಲ್ಲು ಅಪ್ಪು ಪಿಂಗಳೆ (19) ಎಂದು ಗುರುತಿಸಲಾಗಿದೆ. ಯುವಕನ ವಿರುದ್ಧ ಪೋಕ್ಸೋ ಅಡಿ ಪ್ರಕರಣ ದಾಖಲು ಮಾಡಲಾಗಿದೆ.

ಈ ಘಟನೆ ಖಾನಾಪುರ ತಾಲೂಕಿನ ನೆರಸಾ ಗೌಳಿವಾಡ ಗ್ರಾಮದಲ್ಲಿ ನಡೆದಿತ್ತು. ಆಗಸ್ಟ್ 25 ರಂದು ನವಜಾತ ಗಂಡು ಶಿಶುವನ್ನು ಚೀಲದಲ್ಲಿಟ್ಟು ಅಂಗನವಾಡಿ ಬಳಿಯ ಮರಕ್ಕೆ ನೇತುಹಾಕಿದ್ದನ್ನು, ಯಾರೋ ದನಕರುಗಳಿಗೆ ಮೇವು ತರಲು ಹೊರಟಿದ್ದ ಸ್ಥಳೀಯರು ನೋಡಿದ್ದಾರೆ. ನಂತರ ಪರಿಶೀಲಿಸಿದಾಗ ಗಂಡು ಮಗು ಇರುವುದು ಪತ್ತೆಯಾಗಿದೆ.

ಅನಂತರ ಆಶಾ ಕಾರ್ಯಕರ್ತೆ ಸತ್ಯವತಿ ದೇಸಾಯಿ ತಕ್ಷಣ ಆಯಂಬುಲೆನ್ಸ್ ಕರೆಯಿಸಿ ತಾಲೂಕು ಆಸ್ಪತ್ರೆಗೆ ರವಾನಿಸಿದ್ದರು. ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಮಗುವನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಸದ್ಯ ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ನವಜಾತ ಗಂಡು ಶಿಶುಗೆ ಚಿಕಿತ್ಸೆ ಮುಂದುವರೆದಿದೆ.

Leave A Reply

Your email address will not be published.