PM Kisan : ರೈತ ಸಮುದಾಯಕ್ಕೆ ಮಹತ್ವದ ಸುದ್ದಿ | ಸೆ. 7 ರೊಳಗೆ ಇ-ಕೆವೈಸಿ ಮಾಡಿಸಿ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತಿ ವರ್ಷ 6 ಸಾವಿರ ರೂ. ಗಳನ್ನು ಒಟ್ಟು 3 ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ. ಹಾಗಾಗಿ ಸೆಪ್ಟೆಂಬರ್, 07 ರೊಳಗೆ ಇ-ಕೆವೈಸಿ ಮಾಡಿಕೊಂಡ ರೈತರಿಗೆ ಮಾತ್ರ ಸೆಪ್ಟೆಂಬರ್, 15 ರಂದು ಮುಂದಿನ ಕಂತು ಬಿಡುಗಡೆ ಮಾಡಲಾಗುವುದು.

http://pmkisan.gov.in ಪೋರ್ಟಲ್ ನ ಕಾರ್ನರ್ ನ ಇ-ಕೆವೈಸಿ ಅವಕಾಶದಡಿ ರೈತನ ಈಗಾಗಲೇ ಪಿಎಂಕಿಸಾನ್ ಯೋಜನೆಯಡಿ ಫಲಾನುಭವಿಗಳಾಗಿರುವ ಪ್ರತಿಯೊಬ್ಬ ಆಧಾರ್ ಸಂಖ್ಯೆಯನ್ನು ನಂತರ ಆಧಾರ್ ಸಂಖ್ಯೆಯೊಂದಿಗೆ ನೋಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಬೇಕು. ನಂತರ ಮೊಬೈಲ್‌ಗೆ ಒಟಿಪಿ ಯು ರವಾನೆಯಾಗುತ್ತದೆ. ಹೀಗೆ ಸ್ವೀಕರಿಸಿದ ಒಟಿಪಿಯನ್ನು ಪೋರ್ಟಲ್‌ನಲ್ಲಿ ದಾಖಲಿಸಿ ‘ಸಬ್‌ಮಿಟ್ ಫಾರ್ ಆಥ್ ಎಂಬ ಬಟನ್ ಒತ್ತಬೇಕು. ಆಗ ತಂತ್ರಾಂಶ ಆಧಾರಿತ ಪರಿಶೀಲನೆ ನಡೆದು e-KYC is ‘successfully submitted’ ಎಂದು ಕಾಣಿಸುತ್ತದೆ.

ಹೀಗೆ ಮೊಬೈಲ್ ಒಟಿಪಿ ಆಧಾರಿತವಾಗಿ ಫಲಾನುಭವಿಯು ಖುದ್ದಾಗಿ ಇ-ಕೆವೈಸಿ ಮಾಡಬಹುದಾಗಿದೆ. (ಈಗಾಗಲೇ ಇ-ಕೆವೈಸಿ ಆಗಿದ್ದರೆ, “e-KYC already done’ ಎಂಬ ಮಾಹಿತಿ ಗೋಚರಿಸುತ್ತದೆ).

ಈ ಯೋಜನೆಯ ಪ್ರತಿ ಫಲಾನುಭವಿ ರೈತರು, ಕೇಂದ್ರ ಸರ್ಕಾರವು ಮುಂದಿನ ಕಂತಿನಲ್ಲಿ ನೀಡುವ ಆರ್ಥಿಕ ನೆರವು ಪಡೆಯಲು ಸೆಪ್ಟೆಂಬರ್, 07 ರೊಳಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಹೆಚ್ಚಿನ ಮಾಹಿತಿಗೆ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ನಾಗರಿಕ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನಾ ಎಂ.ಷೇಕ್ ಅವರು ತಿಳಿಸಿದ್ದಾರೆ.

ಯಾವ ಫಲಾನುಭವಿಯು ಮೊಬೈಲ್ ಸಂಖ್ಯೆ ಆಧಾರ್ ಸಂಖ್ಯೆಯೊಂದಿಗೆ ಜೋಡಣೆಯಾಗಿರುವುದಿಲ್ಲವೋ ಅಥವಾ ಯಾರ ಮೊಬೈಲ್ ಸಂಖ್ಯೆಗೆ ಇ-ಕೆವೈಸಿಗಾಗಿ ಕಳುಹಿಸಿದ ಒಟಿಪಿಯು ಸ್ವೀಕೃತವಾಗುದಿಲ್ಲವೋ ಅವರು ಸಿಎಸ್‌ಸಿ(ಸಿಟಿಜನ್ ಸರ್ವಿಸ್ ಸೆಂಟರ್ಸ್) ನಾಗರಿಕ ಸೇವಾ ಕೇಂದ್ರಗಳಿಗೆ ತೆರಳಿ ಅಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿ ಮಾಡಬಹುದಾಗಿದೆ. ಅಲ್ಲಿ ಕೈಬೆರಳಿನ ಗುರುತು ಆಧಾರದ ಮೇಲೆ ಇ-ಕೆವೈಸಿ ಮಾಡಬಹುದಾಗಿದೆ.

Leave A Reply

Your email address will not be published.