ONGC Recruitment: ಒಎನ್‌ಜಿಸಿಯಲ್ಲಿದೆ ಉದ್ಯೋಗಾವಕಾಶ; ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (Oil and Natural Gas Corporation Limited) ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿ ಓದಿ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರದ ಹುದ್ದೆಗಳಲ್ಲಿ ಅವಕಾಶ ಹುಡುಕುತ್ತಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

 

ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್ 30 ಆಗಿದೆ. ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲಾಗುತ್ತಿದೆ. 12 ತಿಂಗಳ ಅವಧಿಗೆ ಈ ನೇಮಕಾತಿ ನಡೆಯಲಿದೆ.

ಹುದ್ದೆಗಳ ವಿವರ : ಚಾರ್ಟಡ್ ಅಕೌಂಟೆಂಟ್, ಕಾಸ್ಟ್ ಅಕೌಂಟೆಂಟ್ (Chartered Accountant, Cost Accountant) ಸೇರಿದಂತೆ ಒಟ್ಟು 50 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಸಂಸ್ಥೆಯ ಹೆಸರು: ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC)

ಹುದ್ದೆಗಳ ಸಂಖ್ಯೆ: 50
ಉದ್ಯೋಗ ಸ್ಥಳ: ಅಖಿಲ ಭಾರತ
ಸ್ಟೈಪೆಂಡ್: 15000 ರೂ. ಪ್ರತಿ ತಿಂಗಳು

ಪ್ರಮುಖ ದಿನಾಂಕಗಳು: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01 ಸೆಪ್ಟೆಂಬರ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30ಸೆಪ್ಟೆಂಬರ್ 2022

ವಯಸ್ಸಿನ ಮಿತಿ: ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು 1 ಜನವರಿ 1998 ಅಥವಾ ನಂತರ ಜನಿಸಿದವರಾಗಿರಬೇಕು.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶವಿದೆ

ಅರ್ಜಿ ಶುಲ್ಕ: ವಿನಾಯಿತಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಸ್ಕ್ರೀನಿಂಗ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅಧಿಕೃತ ವೆಬ್‌ಸೈಟ್: ongcindia.com

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ

Leave A Reply

Your email address will not be published.