ಮಾಜಿ ಸಂಸದ ಮುದ್ದಹನುಮೇಗೌಡ ಬಿಜೆಪಿ ಸೇರೋದಾಗಿ ಘೋಷಣೆ
ತುಮಕೂರು: ಮಾಜಿ ಸಂಸದ ಮುದ್ದಹನುಮೇಗೌಡ ( Farmer MP Muddahanumegowda ) ಅವರು ಕಾಂಗ್ರೆಸ್ ಪಕ್ಷಕ್ಕೆ ( Congress Party ) ರಾಜೀನಾಮೆ ನೀಡಿದ್ದರು. ಇದೀಗ ಬಿಜೆಪಿ ಸೇರ್ಪಡೆಗೊಳ್ಳೋದಾಗಿ ಘೋಷಣೆ ಮಾಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ( KPCC President DK Shivakumar ) ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು. ಬಳಿಕ, ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿರುವಂತ ಅವರು, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಅಲ್ಲದೇ ತಾವು ಬಿಜೆಪಿ ಸೇರ್ಪಡೆ ಆಗುತ್ತಿರೋದನ್ನು ಬಹಿರಂಗವಾಗಿಯೇ ಘೋಷಿಸಿದ್ದಾರೆ.
ಒಂದು ಪಕ್ಷ ಬಿಡಲು ಬಲವಾದ ಕಾರಣ, ಅದು ಪಕ್ಷದಿಂದ ಆಗಿರಬೇಕು. ಇಲ್ಲ ನನ್ನಿಂದ ಆಗಿರಬೇಕು. ಅದು ನನ್ನಿಂದ ಕಡೆ ಆದ್ರೆ ಪಕ್ಷ ಸ್ಪಷ್ಟವಾಗಿ ಹೇಳಬೇಕು. ಒಂದು ರಾಷ್ಟ್ರೀಯ ಪಕ್ಷ ಬಿಡಲು ಬಲವಾದ ಕಾರಣದಿಂದ ಇರಬೇಕು ತಾನೇ ಎಂದು ಪ್ರಶ್ನೆ ಮಾಡಿದರು. 1989ರಲ್ಲಿ ಕಾಂಗ್ರೆಸ್ ಬಿ ಫಾರಂ ಕೊಟ್ಟು ನಂತರ ಬೇರೆಯವರಿಗೆ ಕೊಟ್ಟಿದ್ರು. ನಂತರ 2019ರಲ್ಲಿ ಸಂಸದ ಆಗಿದ್ದರೂ ನಿಲ್ಲಲು ಅವಕಾಶ ಕೊಡಲಿಲ್ಲ. ನಾಲ್ಕು ಬಾರೀ ಚುನಾವಣೆಗೆ ಸ್ಪರ್ಧೆ ಮಾಡುವುದನ್ನು ತಪ್ಪಿಸಲಾಗಿದೆ ಎಂದು ತಮ್ಮ ಅಸಮಧಾನ ಹೊರ ಹಾಕಿದರು.