ಚೆನ್ನೈ ಸೂಪರ್ ಕಿಂಗ್ಸ್ ತಂಡದಿಂದ ಮಹತ್ವದ ಘೋಷಣೆ ; ಮುಂದಿನ ಐಪಿಎಲ್ ಗೂ ಧೋನಿಯೇ ಚೆನ್ನೈ ತಂಡದ ನಾಯಕ

ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರು ಆಗಿರುವ ಮಹೇಂದ್ರ ಸಿಂಗ್ ಧೋನಿಯನ್ನು ಐಪಿಎಲ್ 2023 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಸಿಎಸ್ಕೆ ಸಿಇಒ ಕಾಶಿ ವಿಶ್ವನಾಥ್ ಖಚಿತಪಡಿಸಿದ್ದಾರೆ.

 

ಐಪಿಎಲ್ 2022ರಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲವಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸಾಕಷ್ಟು ಗೊಂದಲಕ್ಕೂ ಒಳಗಾಗಿತ್ತು. ನಾಯಕತ್ವದ ವಿಚಾರವಾಗಿ ನಡೆದ ಕೆಲ ಬೆಳವಣಿಗೆಗಳು ತಮಡದ ಪ್ರದರ್ಶನದ ಮೇಲೆ ಪರಿಣಾಮ ಬೀರಿತ್ತು.

ಈ ವರ್ಷದ ಆರಂಭದಲ್ಲಿ ಐಪಿಎಲ್ 2022 ರ ಋತುವಿನಲ್ಲಿ, ಪಂದ್ಯಾವಳಿಯ ಆರಂಭಕ್ಕೆ ಎರಡು ದಿನಗಳ ಮೊದಲು ರವೀಂದ್ರ ಜಡೇಜಾ ಅವರನ್ನು ನಾಯಕನನ್ನಾಗಿ ನೇಮಿಸುವ ಮೂಲಕ ತಂಡವು ನಾಯಕತ್ವದಲ್ಲಿ ಬದಲಾವಣೆಯನ್ನು ಪ್ರಯೋಗಿಸಿತು.

ಆದಾಗ್ಯೂ, ಈ ಪ್ರಯೋಗವು ವಿಫಲವಾಯಿತು ಮತ್ತು ಏಪ್ರಿಲ್ 30 ರಂದು ಪಂದ್ಯಾವಳಿಯ ಮಧ್ಯದಲ್ಲಿ ತಂಡವನ್ನು ಮುನ್ನಡೆಸಲು ಎಂಎಸ್ ಧೋನಿ ಅವರನ್ನು ಮರಳಿ ಕರೆತರಲಾಯಿತು. 41 ವರ್ಷದ ವಿಕೆಟ್ ಕೀಪರ್ ಐಪಿಎಲ್ ಆರಂಭದಿಂದಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿದ್ದು, ನಾಲ್ಕು ಬಾರಿ ಗೆಲುವಿನ ರುಚಿ ಕಂಡಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಿಇಒ ಕಾಸಿ ವಿಶ್ವನಾಥನ್ ಭಾನುವಾರ ಮಹತ್ವದ ಘೋಷಣೆ ಮಾಡಿದ್ದಾರೆ. ಮುಂದಿನ ಐಪಿಎಲ್ ಟೂರ್ನಿಯಲ್ಲಿ ತಂಡವನ್ನು ಮುನ್ನಡೆಸುವವರು ಯಾರು ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಎಂಎಸ್ ಧೋನಿಯೇ ಮುಂದಿನ ಆವೃತ್ತಿಯಲ್ಲಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಲಿದ್ದಾರೆ ಎಂಬುದನ್ನು ಸಿಎಸ್‌ಕೆ ಸಿಇಒ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಇನ್‌ಸೈಡ್‌ಸ್ಪೋರ್ಟ್‌ಗೆ ನೀಡಿದ ಪ್ರತಿಕ್ರಿಯೆಯಲ್ಲಿ ಕಾಸಿ ವಿಶ್ವನಾಥನ್ ಸಿಎಸ್‌ಕೆ ಫ್ರಾಂಚೈಸಿಯ ನಿರ್ಧಾರವನ್ನು ತಿಳಿಸಿದ್ದಾರೆ. ‘ನಮ್ಮ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ. ನಾಯಕತ್ವದಲ್ಲಿ ಬದಲಾವಣೆಯಾಗಲಿದೆ ಎಂಬುದನ್ನು ನಾವು ಯಾವತ್ತೂ ಹೇಳಿಲ್ಲ’ ಎಂದಿದ್ದಾರೆ ಕಾಸಿ ವಿಶ್ವನಾಥನ್. ಎಂಎಸ್ ಧೋನಿ ನೇತೃತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 4 ಬಾರಿ ಐಪಿಎಲ್ ಚಾಂಪಿಯನ್ ಎನಿಸಿಕೊಂಡಿದ್ದು 2021ರಲ್ಲಿ ಕೊನೆಯ ಬಾರಿಗೆ ಟ್ರೋಫಿಯನ್ನು ಎತ್ತಿ ಹಿಡಿದಿತ್ತು.

Leave A Reply

Your email address will not be published.