ಉಡುಪಿ : ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ರವಿವಾರ ಮುಂಜಾನೆ ಎರಡು ಕಡೆಗಳಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಭೂ ವಿಜ್ಞಾನಿ ಕು.ಸಂಧ್ಯಾ ಕುಮಾರಿ ಬಿ.ಎನ್ ಅವರು ದಾಳಿ ನಡೆಸಿ 4 ಲಾರಿ ಸಹಿತ 8 ಮೆಟ್ರಿಕ್ ಟನ್ ಮರಳು, 14 ಮೆಟ್ರಿಕ್ ಟನ್ ಕೆಂಪುಕಲ್ಲು ವಶಕ್ಕೆ ಪಡೆದಿದ್ದಾರೆ.
ಉಡುಪಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಸಂದೀಪ್ ಜಿ. ಯು ಅವರ ಮಾರ್ಗದರ್ಶನದಲ್ಲಿ ಮುಂಜಾನೆ ಕುಂದಾಪುರ ತಾಲೂಕು ಹಕ್ಲಾಡಿ ಗ್ರಾಮದ ಬಟ್ಟೆಕುದ್ರು ಪರಿಸರದ ಚಕ್ರ ನದಿಯಲ್ಲಿ ಅನಧಿಕೃತವಾಗಿ ಮರಳುಗಾರಿಕೆ ನಡೆಸಿ ಸಾಗಾಣಿಕೆ ನಡೆಸುತ್ತಿರುವ ಬಗ್ಗೆ ರಾತ್ರಿ ಬಂದ ಸಾರ್ವಜನಿಕರ ಮಾಹಿತಿ ಮೇರೆಗೆ ಇಲಾಖೆಯ ಭೂ ವಿಜ್ಞಾನಿ ಸಂಧ್ಯಾ ಅವರು ಮುಂಜಾನೆ 5.30ಕ್ಕೆ ದಾಳಿ ನಡೆಸಿ ಮತ್ತು 8 ಮೆಟ್ರಿಕ್ ಟನ್ ಮರಳು ಸಹಿತ ಒಂದು ಲಾರಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.