9,000 ಕೋಟಿ ರೂ.ಸಾಲ ಮರುಪಾವತಿ ಮಾಡದ ವಿಜಯ ಮಲ್ಯ | ನ್ಯಾಯಾಂಗ ನಿಂದನೆಗೆ ಇಂದು ಶಿಕ್ಷೆ ಪ್ರಕಟಿಸಲಿದೆ ಸುಪ್ರೀಂ ಕೋರ್ಟ್

Share the Article

ಬರೋಬ್ಬರಿ 9,000 ಕೋಟಿ ರೂ.ಗೂ ಅಧಿಕ ಮೊತ್ತದ ಬ್ಯಾಂಕ್ ಸಾಲ ಮರುಪಾವತಿ ಮಾಡದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿರುವ ಉದ್ಯಮಿ ವಿಜಯ್ ಮಲ್ಯ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸೋಮವಾರ ಸುಪ್ರೀಂ ಕೋರ್ಟ್ ಶಿಕ್ಷೆ ಪ್ರಮಾಣ ಪ್ರಕಟಿಸುವ ಸಾಧ್ಯತೆಯಿದೆ.

ಮಲ್ಯ ಅವರು ನ್ಯಾಯಾಂಗ ನಿಂದನೆ ಆರೋಪದಲ್ಲಿ ತಪ್ಪಿತಸ್ಥರೆಂದು ನ್ಯಾಯಾಲಯ ತೀರ್ಪು ನೀಡಿದ್ದು, ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಮತ್ತು ನ್ಯಾಯಮೂರ್ತಿ ಎಸ್. ರವೀಂದ್ರ ಭಟ್ ಅವರನ್ನೊಳಗೊಂಡ ಪೀಠವು ಮಾ.10 ರಂದು ಪ್ರಕರಣದಲ್ಲಿ ಶಿಕ್ಷೆಯ ಆದೇಶವನ್ನು ಕಾಯ್ದಿರಿಸಿತ್ತು.

ಈ ಹಿಂದೆ, 9,000 ಕೋಟಿ ರೂ.ಗಿಂತ ಹೆಚ್ಚಿನ ಸಾಲವನ್ನು ಮರುಪಾವತಿಸಲು ಮಲ್ಯ ನ್ಯಾಯಾಲಯದ ಆದೇಶವನ್ನು ಅನುಸರಿಸುತ್ತಿಲ್ಲ ಎಂದು ಆರೋಪಿಸಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ ಸಾಲ ನೀಡುವ ಬ್ಯಾಂಕ್‌ಗಳ ಒಕ್ಕೂಟವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

Leave A Reply