ಫೋನ್, ಇಂಟರ್ನೆಟ್ ಇಲ್ಲದೆಯೂ ಬಳಸಬಹುದು ವಾಟ್ಸಪ್ | ಹೇಗೆ ಅನ್ನೋ ಟ್ರಿಕ್ ನಿಮಗೆ ಗೊತ್ತಾ?

ವಾಟ್ಸಪ್ ತನ್ನ ಗ್ರಾಹಕರನ್ನು ಹೆಚ್ಚಿಸುವ ಸಲುವಾಗಿ ಹೊಸ ಹೊಸ ಫೀಚರ್ ಗಳನ್ನು ಅಪ್ಡೇಟ್ ಮಾಡುತ್ತಲೇ ಬಂದಿದ್ದು, ಈ ಮೂಲಕ ಬಳಕೆದಾರರನ್ನು ತನ್ನತ್ತ ಸೆಳೆಯುತ್ತಿದೆ. ವಾಟ್ಸಪ್ ಫೋನ್ ಇಲ್ಲದೆ ಅಥವಾ ಇಂಟರ್ನೆಟ್ ಇಲ್ಲದೆ ನಿಮ್ಮ ಸ್ನೇಹಿತರು, ಕುಟುಂಬದವರು ಅಥವಾ ಯಾರ ಜೊತೆ ಬೇಕಾದರು ಚಾಟ್ ಮಾಡಬಹುದಾದ ಆಯ್ಕೆಯನ್ನು ವಾಟ್ಸ್​​ಆಪ್ ನೀಡಿದೆ.

 

ವಾಟ್ಸ್​ಆಪ್ ಖಾತೆಯನ್ನು ಒಂದೇ ಸಮಯದ ವೇಳೆ ಬೇರೆ ಬೇರೆ ಡಿವೈಸ್​ಗೆ ಲಿಂಕ್ ಮಾಡುವ ಮೂಲಕ ವಾಟ್ಸ್​ಆಪ್ ಅನ್ನು ಹಲವು ಡಿವೈಸ್​ಗಳಲ್ಲಿ (WhatsApp Multiple Device) ಬಳಕೆ ಮಾಡಬಹುದಾಗಿದೆ . ಒಂದು ಬಾರಿ ನಿಮ್ಮ ಮೊಬೈಲ್ ಮೂಲಕ ಲಿಂಕ್ ಮಾಡಿದರೆ ನಂತರ ಆ ಮೊಬೈಲ್ ಲಿಂಕ್ ಮಾಡಿದ ಡಿವೈಸ್ ಹತ್ತಿರ ಇರಬೇಕೆಂದಿಲ್ಲ.

ಅಂದರೆ ಈ ಮಲ್ಟಿಡಿವೈಸ್ ಫೀಚರ್‌ ಬಳಸಿಕೊಂಡು ಬಳಕೆದಾರರು ಒಂದೇ ಸಮಯದಲ್ಲಿ ನಾಲ್ಕು ಸಾಧನಗಳು ಮತ್ತು ಒಂದು ಫೋನ್ ಅನ್ನು ಸಂಪರ್ಕಿಸಬಹುದು. ಒಂದೇ ವಾಟ್ಸ್​​​ಆಪ್ ಅನ್ನು ಇತರೆ ಮೂರು ಲ್ಯಾಪ್ಟರ್ ಅಥವಾ ಡೆಸ್ಕ್​ಟಾಪ್​ನಲ್ಲಿ ಬಳಸಬಹುದು. ಆದರೆ, ಫೋನ್ 14 ದಿನಗಳವರೆಗೆ ನಿಷ್ಕ್ರಿಯವಾಗಿದ್ದರೆ ಸಂಪರ್ಕಿತ ಸಾಧನಗಳು ಸಂಪರ್ಕ ಕಡಿತಗೊಳ್ಳುತ್ತವೆ.

ಈ ಫೀಚರ್ ಅನ್ನು ಬಳಸಬೇಕಾದರೆ ನಿಮ್ಮ ಮೊಬೈಲ್‌ನಲ್ಲಿ ವಾಟ್ಸ್​​ಆಪ್​ ಮೇಲೆ ಕ್ಲಿಕ್ ಮಾಡಿ ಮತ್ತು ಮೂರು–ಡಾಟ್ ಮೆನು ಮೇಲೆ ಟ್ಯಾಪ್ ಮಾಡಿ. ಲಿಂಕ್ ಮಾಡಲಾದ ಸಾಧನಗಳನ್ನು ಆಯ್ಕೆಮಾಡಿ. ಐಒಎಸ್ ಬಳಕೆದಾರರಿಗೆ, ಸೆಟ್ಟಿಂಗ್‌ಗಳ ಐಕಾನ್ ಟ್ಯಾಪ್ ಮಾಡುವ ಮೂಲಕ ವಾಟ್ಸ್​ಆಪ್​​ ಆಯ್ಕೆಮಾಡಿ ಲಿಂಕ್ಡ್ ಸಾಧನಗಳನ್ನು ಕ್ಲಿಕ್ ಮಾಡಿ, ಆಯ್ಕೆಮಾಡಿ.

ಬಯೋಮೆಟ್ರಿಕ್ ದೃಢೀಕರಣದೊಂದಿಗೆ ನಿಮ್ಮ ಫೋನ್ ಅನ್ನು ಅನ್ಲಾಕ್ ಮಾಡಿ ಅಥವಾ ಪಿನ್ ನಮೂದಿಸಿ. web.whatsapp.com ಅಥವಾ WhatsApp ಅನ್ನು ಡೆಸ್ಕ್‌ಟಾಪ್ PC ಅಥವಾ ಲ್ಯಾಪ್‌ಟಾಪ್‌ನಲ್ಲಿ ತೆರೆಯಿರಿ.
ಸೆಲ್ಫೋನ್ ಮೂಲಕ ಪರದೆಯ ಮೇಲೆ ಪ್ರದರ್ಶಿಸಲಾದ QR ಕೋಡ್ ಅನ್ನು ಸ್ಕ್ಯಾನ್ ಮಾಡಿ. ಈಗ ಲಿಂಕ್ ಆಗುತ್ತದೆ. ಈ ಮೂಲಕ ಉಪಯೋಗಿಸಬಹುದು.

ಇಲ್ಲಿ ಸ್ಮಾರ್ಟ್​​ಫೋನ್​ನಲ್ಲಿ ಇಂಟರ್ನೆಟ್ ಆಫ್ ಇದ್ದರೂ, ಮೊಬೈಲ್ ಸ್ವಿಚ್ ಆಫ್ ಆಗಿದ್ದರೂ ಉಪಯೋಗಿಸಬಹುದಾಗಿದೆ. ಅನ್​ಲಿಂಕ್ ಮಾಡಲು ಬಳಕೆದಾರರು ತಮ್ಮ ವಾಟ್ಸ್​ಆಪ್​ ಅನ್ನು ತೆರೆದು ಮೂರು–ಡಾಟ್ ಮೆನುವಿನಲ್ಲಿ ಟ್ಯಾಪ್ ಮಾಡಿ. ಲಿಂಕ್ ಮಾಡಲಾದ ಸಾಧನಗಳನ್ನು ಆಯ್ಕೆಮಾಡಿ. ಈಗ ನೀವು ಲಿಂಕ್ ಆದ ಡಿವೈಸ್​ಗಳ ಪಟ್ಟಿಯನ್ನು ಕಾಣುತ್ತೀರಿ. ಯಾವ ಡಿವೈಸ್ ಅನ್ನು ಅನ್​ಲಿಂಕ್ ಮಾಡಬೇಕು ಅದರ ಮೇಲೆ ಕ್ಲಿಕ್ ಮಾಡಿ ನಂತರ ಲಾಗೌಟ್ ಆಯ್ಕೆ ಸೆಲೆಕ್ಟ್ ಮಾಡಿ.

Leave A Reply

Your email address will not be published.