ಹೃದಯಾಘಾತದಿಂದ ಬಿಜೆಪಿ ಶಾಸಕ ನಿಧನ : ಮುಖ್ಯಮಂತ್ರಿ ಸಂತಾಪ

ಉತ್ತರ ಪ್ರದೇಶ : ಉತ್ತರ ಪ್ರದೇಶ ಲಖಿಂಪುರ ಖೇರಿ ಬಿಜೆಪಿ ಶಾಸಕ ಅರವಿಂದ್ ಗಿರಿ ಅವರು ಮಂಗಳವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮಂಗಳವಾರ ಬೆಳಿಗ್ಗೆ ಕಾರಿನಲ್ಲಿ ಲಕ್ನೋ ಗೆ ತೆರಳುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡಿದ್ದು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಅಷ್ಟೋತ್ತಿಗಾಗಲೇ ಕೊನೆಯುಸಿರೆಳೆದಿದ್ದರು ಎಂದು ಅರವಿಂದ್ ಗಿರಿ ಅವರ ಸಹೋದರ ಮಾಹಿತಿ ನೀಡಿದ್ದಾರೆ.

ಗಿರಿ ಅವರು ವಿದ್ಯಾರ್ಥಿ ಜೀವನದಲ್ಲೇ ರಾಜಕೀಯದಲ್ಲಿ ತನ್ನನು ತಾನು ತೊಡಗಿಸಿಕೊಂಡು ಸೃಜನಶೀಲರಾಗಿದ್ದರು ಎನ್ನಲಾಗಿದೆ.

1993ರಲ್ಲಿ ಸಮಾಜವಾದಿ ಪಕ್ಷಕ್ಕೆ ಸೇರಿದ ಅರವಿಂದ ಗಿರಿ, 2006 ರಲ್ಲಿ ನಡೆದ ಮೊದಲ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಗೆದ್ದರು. ಬಳಿಕ ಭಾರತೀಯ ಜನತಾ ಪಾರ್ಟಿಗೆ ಸೇರಿದ ಅವರು 2017 ಮತ್ತು 2022 ಯುಪಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆದ್ದಿದ್ದಾರೆ.

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ.

Leave A Reply