ಕರ್ನಾಟಕದಾದ್ಯಂತ ಮತ್ತೆ ಭಾರೀ ಮಳೆ ಸಂಭವ : ರೆಡ್ ಅಲರ್ಟ್ ಘೋಷಣೆ

Share the Article

ರಾಜ್ಯದಾದ್ಯಂತ ಮಳೆ ಹೆಚ್ಚಾಗುವ ಲಕ್ಷಣಗಳು ಕಾಣುತ್ತಲೇ ಇದೆ. ಮುಂಗಾರು ದಿನದಿಂದ ದಿನಕ್ಕೆ ಚುರುಕುಗೊಳ್ಳುತ್ತಲೇ ಇದೆ. ಇದೀಗ ರಾಜ್ಯದಲ್ಲಿ ಮತ್ತೆ 20 ಸೆಂ.ಮೀ.ಗೂ ಹೆಚ್ಚು ಮಳೆ ಬೀಳಲಿದ್ದು, ‘ರೆಡ್ ಅಲರ್ಟ್‌’ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರ ಮುನ್ಸೂಚನೆ ನೀಡಿದೆ.

ಕೆಲವು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್, ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬೀದರ್, ರಾಯಚೂರು, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ದಿನ ಬಿಟ್ಟು ದಿನ ಭಾರೀ ಮಳೆ ಸುರಿಯಲಿದೆ. ಹೀಗಾಗಿ ಇಷ್ಟು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ.

ಕರ್ನಾಟಕದ ಕರಾವಳಿ ಮತ್ತು ಒಳನಾಡಿನ ಎಲ್ಲ ಭಾಗದಲ್ಲೂ ಮುಂದಿನ 5 ದಿನ (ಸೆ.11)ಗಳವರೆಗೆ ಗುಡುಗು ಸಹಿತ ಜೋರು ಮಳೆಯ ನಿರೀಕ್ಷೆ ಇದೆ. ಈ ಪೈಕಿ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸುಮಾರು 20 ಸೆಂ. ಮೀ. ಗಿಂತ ಹೆಚ್ಚು ಮಳೆ ಆಗಲಿದೆ. ಮೂರು ಜಿಲ್ಲೆಗಳಿಗೆ ಸೆ.8ರಂದು ಮಾತ್ರ ‘ರೆಡ್ ಅಲರ್ಟ್’ ಕೊಡಲಾಗಿದೆ.

ಕರಾವಳಿ ಮೂರು ಜಿಲ್ಲೆಗಳಾದ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಹಾಗೂ ಒಂದೆರಡು ದಿನ ಬೆಳಗಾವಿ, ಬೀದರ್, ರಾಯಚೂರು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಈ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

Leave A Reply