KPSC : 106 ಕೆಎಎಸ್ ಹುದ್ದೆಗಳಿಗೆ ತಾತ್ಕಾಲಿಕ ಪಟ್ಟಿ, ಕಟ್‌ಆಫ್ ಅಂಕ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ 106 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಅಭ್ಯರ್ಥಿಗಳು ಕೆಪಿಎಸ್‌ಸಿ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆಯ್ಕೆಪಟ್ಟಿ ಚೆಕ್ ಮಾಡಬಹುದು.

 

ಕೆಪಿಎಸ್‌ಸಿ ಪ್ರಸ್ತುತ ಬಿಡುಗಡೆ ಮಾಡಿರುವ ಸದರಿ ಆಯ್ಕೆಪಟ್ಟಿಗೆ ಏನಾದರೂ ಆಕ್ಷೇಪಣೆಗಳು ಇದ್ದಲ್ಲಿ, ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಿದ 07 ದಿವಸಗಳೊಳಗಾಗಿ ವಿಳಾಸ – ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು 01, ಇವರಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಲಾಗಿದೆ.

ಆಯ್ಕೆಪಟ್ಟಿಯಲ್ಲಿ ಅಭ್ಯರ್ಥಿಗಳ ರಿಜಿಸ್ಟರ್ ನಂಬರ್, ಹೆಸರು, ಪೂರ್ಣ ವಿಳಾಸ, ಯಾವ ಇಲಾಖೆಗೆ ಆಯ್ಕೆ ಆಗಿದ್ದಾರೆ, ಸ್ಪರ್ಧಾತ್ಮಕ ಪರೀಕ್ಷೆ ಅಂಕಗಳನ್ನು ಸಹ ನೀಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave A Reply

Your email address will not be published.