KPSC Recruitment: ರೇಷ್ಮೆ ಇಲಾಖೆ ಹುದ್ದೆಗಳಿಗೆ ಮತ್ತೆ ಅಧಿಸೂಚನೆ | ಸೆ.17 ರಿಂದ ಅರ್ಜಿ ಆಹ್ವಾನ
ಕರ್ನಾಟಕ ಲೋಕಸೇವಾ ಆಯೋಗವು (KPSC) ಕಳೆದ ಆಗಸ್ಟ್ ತಿಂಗಳಲ್ಲಿ ರೇಷ್ಮೆ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದಲ್ಲಿ ಗ್ರೂಪ್-ಬಿ ರೇಷ್ಮೆ ವಿಸ್ತರಣಾಧಿಕಾರಿಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದ್ದು, ಈ ಹುದ್ದೆಗಳಿಗೆ ಸೆಪ್ಟೆಂಬರ್ 9 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಇದೀಗ ಮತ್ತೊಂದು ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು, ರೇಷ್ಮೆ ಇಲಾಖೆಯಡಿ ಖಾಲಿ ಇರುವ ಹೈದರಾಬಾದ್ ಕರ್ನಾಟಕ ವೃಂದದ ಹುದ್ದೆಗಳಿಗೆ ಈಗ ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ.
ಹುದ್ದೆಗಳ ವಿವರ ; ಒಟ್ಟು 06 ರೇಷ್ಮೆ ವಿಸ್ತರಣಾ ಅಧಿಕಾರಿ (sericulture extension officer hk) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಮುಖ ದಿನಾಂಕ : ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 17 ರವರೆಗೆ ಅರ್ಜಿ ಸ್ವೀಕಾರ ಮಾಡುವುದಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅಪ್ಲಿಕೇಶನ್ ಸಲ್ಲಿಸಲು ಪ್ರಾರಂಭಿಕ ದಿನಾಂಕ: 17-09-2022
ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಸಲು ಕೊನೆ ದಿನಾಂಕ: 17-10-2022
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 18-10-2022
ವಿದ್ಯಾರ್ಹತೆ : ಈ ಹುದ್ದೆಗಳಿಗೆ ಸಿರಿಕಲ್ಚರ್ ವಿಷಯದಲ್ಲಿ ಸ್ನಾತಕೋತ್ತರ ಪದವಿ / ಪದವಿ ಅಥವಾ ಬಿಎಸ್ಸಿ ಜತೆಗೆ ಪೋಸ್ಟ್ ಗ್ರಾಜುಯೇಟ್ ಡಿಪ್ಲೋಮಾ ಇನ್ ಸಿರಿಕಲ್ಚರ್ ಪಾಸ್ ಮಾಡಿದ ಅಥವಾ ಅಗ್ರಿಕಲ್ಚರ್ / ಹಾರ್ಡಿ ಕಲ್ಚರ್ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಇತರೆ ಹೆಚ್ಚಿನ ಮಾಹಿತಿಗಳನ್ನು ಈ ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಬಹುದು.
ವೇತನ ಶ್ರೇಣಿ : Rs.49,900 – ರೂ. 78,200
ಅರ್ಜಿ ಶುಲ್ಕ : ಜೆನೆರಲ್ ಕೆಟಗರಿ ಅಭ್ಯರ್ಥಿಗಳಿಗೆ ರೂ.600/-, ಹಿಂದುಳಿದ ವರ್ಗಗಳ / ಆರ್ಥಿಕವಾಗಿ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ.300.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50. ಎಸ್‌ಸಿ / ಎಸ್‌ಟಿ / ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ರೂ.35 ರ ಅರ್ಜಿ ಪ್ರಕ್ರಿಯೆ ಶುಲ್ಕವನ್ನು ಎಲ್ಲ ಅಭ್ಯರ್ಥಿಗಳು ಪಾವತಿಸಬೇಕು.
ವಯೋಮಿತಿ : ಅಭ್ಯರ್ಥಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 35 ವರ್ಷ ವಯೋಮಿತಿ ಮೀರಿರಬಾರದು. ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ವಯೋಮಿತಿ
ಎಸ್‌ಸಿ / ಎಸ್‌ಟಿ / ಪ್ರ-1 ಅಭ್ಯರ್ಥಿಗಳಿಗೆ ಗರಿಷ್ಠ 40
ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನೋಟಿಫಿಕೇಶನ್ ಕ್ಲಿಕ್ ಮಾಡಿ
Wow, marvelous blog format! How long have you been blogging for?
you make blogging look easy. The full look of your site is fantastic, as well as the content material!
You can see similar here e-commerce
how much is a ventolin: buy albuterol inhaler – ventolin generic cost
can i buy ventolin online mexico