KPSC Recruitment: ರೇಷ್ಮೆ ಇಲಾಖೆ ಹುದ್ದೆಗಳಿಗೆ ಮತ್ತೆ ಅಧಿಸೂಚನೆ | ಸೆ.17 ರಿಂದ ಅರ್ಜಿ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗವು (KPSC) ಕಳೆದ ಆಗಸ್ಟ್ ತಿಂಗಳಲ್ಲಿ ರೇಷ್ಮೆ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದಲ್ಲಿ ಗ್ರೂಪ್-ಬಿ ರೇಷ್ಮೆ ವಿಸ್ತರಣಾಧಿಕಾರಿಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದ್ದು, ಈ ಹುದ್ದೆಗಳಿಗೆ ಸೆಪ್ಟೆಂಬರ್ 9 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಇದೀಗ ಮತ್ತೊಂದು ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು, ರೇಷ್ಮೆ ಇಲಾಖೆಯಡಿ ಖಾಲಿ ಇರುವ ಹೈದರಾಬಾದ್ ಕರ್ನಾಟಕ ವೃಂದದ ಹುದ್ದೆಗಳಿಗೆ ಈಗ ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ.

ಹುದ್ದೆಗಳ ವಿವರ ; ಒಟ್ಟು 06 ರೇಷ್ಮೆ ವಿಸ್ತರಣಾ ಅಧಿಕಾರಿ (sericulture extension officer hk) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಮುಖ ದಿನಾಂಕ : ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 17 ರವರೆಗೆ ಅರ್ಜಿ ಸ್ವೀಕಾರ ಮಾಡುವುದಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅಪ್ಲಿಕೇಶನ್ ಸಲ್ಲಿಸಲು ಪ್ರಾರಂಭಿಕ ದಿನಾಂಕ: 17-09-2022
ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಸಲು ಕೊನೆ ದಿನಾಂಕ: 17-10-2022
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 18-10-2022

ವಿದ್ಯಾರ್ಹತೆ : ಈ ಹುದ್ದೆಗಳಿಗೆ ಸಿರಿಕಲ್ಚರ್ ವಿಷಯದಲ್ಲಿ ಸ್ನಾತಕೋತ್ತರ ಪದವಿ / ಪದವಿ ಅಥವಾ ಬಿಎಸ್ಸಿ ಜತೆಗೆ ಪೋಸ್ಟ್ ಗ್ರಾಜುಯೇಟ್ ಡಿಪ್ಲೋಮಾ ಇನ್ ಸಿರಿಕಲ್ಚರ್ ಪಾಸ್ ಮಾಡಿದ ಅಥವಾ ಅಗ್ರಿಕಲ್ಚರ್ / ಹಾರ್ಡಿ ಕಲ್ಚರ್ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಇತರೆ ಹೆಚ್ಚಿನ ಮಾಹಿತಿಗಳನ್ನು ಈ ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಬಹುದು.

ವೇತನ ಶ್ರೇಣಿ : Rs.49,900 – ರೂ. 78,200

ಅರ್ಜಿ ಶುಲ್ಕ : ಜೆನೆರಲ್ ಕೆಟಗರಿ ಅಭ್ಯರ್ಥಿಗಳಿಗೆ ರೂ.600/-, ಹಿಂದುಳಿದ ವರ್ಗಗಳ / ಆರ್ಥಿಕವಾಗಿ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ.300.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50. ಎಸ್‌ಸಿ / ಎಸ್‌ಟಿ / ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ರೂ.35 ರ ಅರ್ಜಿ ಪ್ರಕ್ರಿಯೆ ಶುಲ್ಕವನ್ನು ಎಲ್ಲ ಅಭ್ಯರ್ಥಿಗಳು ಪಾವತಿಸಬೇಕು.

ವಯೋಮಿತಿ : ಅಭ್ಯರ್ಥಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 35 ವರ್ಷ ವಯೋಮಿತಿ ಮೀರಿರಬಾರದು. ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ವಯೋಮಿತಿ
ಎಸ್‌ಸಿ / ಎಸ್‌ಟಿ / ಪ್ರ-1 ಅಭ್ಯರ್ಥಿಗಳಿಗೆ ಗರಿಷ್ಠ 40
ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನೋಟಿಫಿಕೇಶನ್ ಕ್ಲಿಕ್ ಮಾಡಿ

Leave A Reply

Your email address will not be published.