ಬೆಳ್ಳಾರೆ ಸಮೀಪ ಮನೆಗೆ ಬೆಂಕಿ ಬಿದ್ದು ಯಜಮಾನ ಸಜೀವ ದಹನ

Share the Article

ಸುಳ್ಯ : ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯೊಳಗೆ ಮಲಗಿದ್ದ ಯಜಮಾನ ಜೀವಂತ ದಹನವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆಯೊಂದು ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಐವರ್ನಾಡಿನಲ್ಲಿ ಸಂಭವಿಸಿದೆ.

ಐವರ್ನಾಡಿನ ಪರ್ಲಿಕಜೆ ಸುಧಾಕರ (47) ದುರ್ಘಟನೆಯಲ್ಲಿ ಸಾವಿಗೀಡಾದ ವ್ಯಕ್ತಿ.ಬುಧವಾರ ಬೆಳಿಗ್ಗೆ ಸುಧಾಕರರು ಮನೆಯಲ್ಲಿ ಮಲಗಿದ್ದು, ಪತ್ನಿ ಟ್ಯಾಪಿಂಗ್‌ಗೆಂದು ಹೋಗಿದ್ದರು. ಮಗಳು ಶಾಲೆಗೆ ತೆರಳಿದ್ದಳು. ಈ ಹೊತ್ತಿನಲ್ಲಿ ಬೆಂಕಿ ಮನೆಯ ಒಂದು ಪಾರ್ಶ್ವವನ್ನು ಸುಟ್ಟು ಹಾಕಿತ್ತು.

ಮನೆಯೊಳಗೆ ಉರಿಸಿದ್ದ ದೀಪದಿಂದ ಬೆಂಕಿ ಹತ್ತಿಕೊಂಡಿರಬಹುದೆಂದು ಶಂಕಿಸಲಾಗಿದೆ. ಪೊಲೀಸರು, ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದಾರೆ.

Leave A Reply