ರೈತರೇ ಗಮನಿಸಿ : PM Kisan  ಯೋಜನೆಯಡಿ ಪರಿಹಾರ  | e – kyc ಗೆ ಇಂದೇ ಕೊನೆಯ ದಿನ

ಮಂಗಳೂರು/ಉಡುಪಿ : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿ.ಎಂ-ಕಿಸಾನ್) ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಲು ಸೆ. 7ರಂದು ಕೊನೆಯ ದಿನವಾಗಿದೆ.

ರೈತರು ಇ-ಕೆವೈಸಿ ಮಾಡಿಸದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ. ಸ್ಮಾರ್ಟ್‌ಫೋನ್ ಬಳಸುವ ರೈತರು /pmkisan.gov.in ಪೋರ್ಟಲ್‌ನ ಫಾರ್ಮರ್ ಕೋರ್ನ‌್ರನ ಇ-ಕೆವೈಸಿ ಅವಕಾಶದಡಿ ತಮ್ಮ ಆಧಾರ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆ ದಾಖಲಿಸಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು.

ರೈತರು ನಾಗರಿಕ ಸೇವಾ ಕೇಂದ್ರ (ಸಿಎಸ್‌ಸಿ) ಗ್ರಾಮ ಒನ್ ಸೇವಾ ಕೇಂದ್ರದಲ್ಲಿಯೂ ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಹತ್ತಿರದ ಹೋಬಳಿಯ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಸರ್ಕಾರವು ಅನೇಕ ಯೋಜನೆಯ ಮೂಲಕ ಕೃಷಿ ಚಟವಟಿಕೆಗಳನ್ನು ಬೆಂಬಲಿಸಿ ರೈತರ ಏಳಿಗೆಗಾಗಿ ಶ್ರಮಿಸುತ್ತಿದೆ.

ರೈತರ ಆರ್ಥಿಕ ಸಹಾಯಕ್ಕಾಗಿ ಕೇಂದ್ರ ಸರ್ಕಾರವು ಪ್ರಾರಂಭಿಸಿರುವ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ಜಮೀನು ಹೊಂದಿರುವ ಪ್ರತಿ ರೈತರ ಕುಟುಂಬಗಳು ವರ್ಷಕ್ಕೆ 6000 ರೂ. ಆರ್ಥಿಕ ಸಹಾಯವನ್ನು ಪಡೆಯಬಹುದು.

ಕಂತಿನ ಸ್ಥಿತಿಯನ್ನು ಪರಿಶೀಲಿಸುವುದು ಹೇಗೆ?
PM  ಕಿಸಾನ್ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ನಂತರ ಕಿಸಾನ್ ಕಾರ್ನರ್ ಮೇಲೆ ಕ್ಲಿಕ್ ಮಾಡಿ.ಈಗ ಬೆನಿಫಿಶಿಯರಿ ಸ್ಟೇಟಸ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿದಾಗ  ಹೊಸ ಪುಟ ತೆರೆದುಕೊಳ್ಳುತ್ತದೆ.
ಇಲ್ಲಿ ಅರ್ಹ ಫಲಾನುಭವಿ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು
ಇದರ ನಂತರ ನಿಮಗೆ ನಿಮ್ಮ ಸ್ಥಿತಿಯ ಬಗ್ಗೆ ಸಂಪೂರ್ಣ ಮಾಹಿತಿ ಸಿಗಲಿದೆ.

ಫಲಾನುಭವಿಗಳ ಪಟ್ಟಿಯನ್ನು ಪಂಚಾಯಿತಿಗಳಲ್ಲಿ ಪ್ರದರ್ಶಿಸಲಾಗುತ್ತದೆ. ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಸಿಸ್ಟಂ-ರಚಿತ SMS ಮೂಲಕ ಫಲಾನುಭವಿಗೆ ಪ್ರಯೋಜನದ ಮಂಜೂರಾತಿಯನ್ನು ಸಹ ಸೂಚಿಸುತ್ತವೆ. PM ಕಿಸಾನ್ ಪೋರ್ಟಲ್‌ನಲ್ಲಿ ನಿಮ್ಮ ಸ್ಥಿತಿಯನ್ನು ಸಹ ನೀವು ಖಚಿತಪಡಿಸಿಕೊಳ್ಳಬಹುದು.
ಸರ್ಕಾರ ರೈತರ ಜೀವನ ಸುಗಮಗೊಳಿಸಲು ಹಲವು ಯೋಜನೆಯನ್ನು ಜಾರಿಗೊಳಿಸಿ ಅನೇಕ ಕುಟುಂಬ ಗಳಿಗೆ ನೆರವಾಗಿದೆ.

Leave A Reply

Your email address will not be published.