ಅಂಗನವಾಡಿಯಲ್ಲಿ ಉದ್ಯೋಗವಕಾಶ | 4th, 10th ಪಾಸಾದವರಿಗೆ ಉದ್ಯೋಗಾವಕಾಶ | ಅರ್ಜಿ ಸಲ್ಲಿಸಲು ಅಕ್ಟೋಬರ್ 06 ಕೊನೆಯ ದಿನಾಂಕ

Share the Article

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಿಜಯನಗರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ.

ವಿಜಯನಗರ ಜಿಲ್ಲೆಯ 5 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 15 ಅಂಗನವಾಡಿ ಕಾರ್ಯಕರ್ತೆ ಮತ್ತು 48 ಅಂಗನವಾಡಿ ಸಹಾಯಕಿಯರ ಗೌರವ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್‌ ಮೂಲಕ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನೇಮಕಾತಿ ಇಲಾಖೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ.
ಉದ್ಯೋಗ ಜಿಲ್ಲೆ : ವಿಜಯನಗರ ಜಿಲ್ಲೆ
ಹುದ್ದೆಗಳ ವಿವರ : ಅಂಗನವಾಡಿ ಕಾರ್ಯಕರ್ತೆ: 15
ಅಂಗನವಾಡಿ ಸಹಾಯಕಿ: 48

ಅಪ್ಲಿಕೇಶನ್ ಸಲ್ಲಿಸಲು ಆರಂಭಿಕ ದಿನಾಂಕ: 07-09-2022.
ಅಪ್ಲಿಕೇಶನ್ ಸಲ್ಲಿಸಲು ಕೊನೆ ದಿನಾಂಕ: 06-10-2022 ರ ಸಂಜೆ 05-30 ರವರೆಗೆ.

ವಿದ್ಯಾರ್ಹತೆ : ಅಂಗನವಾಡಿ ಕಾರ್ಯಕರ್ತೆ: 10ನೇ ತರಗತಿ ಉತ್ತೀರ್ಣ.
ಅಂಗನವಾಡಿ ಸಹಾಯಕಿ: ಕನಿಷ್ಟ 4ನೇ ತರಗತಿ ಉತ್ತೀರ್ಣ.

ಸಹಾಯಕಿ ಹುದ್ದೆಗೆ ಗರಿಷ್ಟ 9ನೇ ತರಗತಿವರೆಗೆ ತೇರ್ಗಡೆ ಹೊಂದಿರುವವರು ಅರ್ಜಿ ಹಾಕಬಹುದು. ಯಾವುದೇ ಹುದ್ದೆಗಳಿಗೆ 10 ನೇ ತರಗತಿ ನಂತರ ಹೆಚ್ಚಿನ ಶಿಕ್ಷಣ ಪಡೆದವರು ಅರ್ಜಿ ಹಾಕಲು ಅವಕಾಶ ಇಲ್ಲ.

ವಯಸ್ಸಿನ ಅರ್ಹತೆ: ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ತುಂಬಿರಬೇಕು. ಗರಿಷ್ಠ 35 ವರ್ಷ ಮೀರಿರಬಾರದು.

ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ಕ್ಲಿಕ್ ಮಾಡಿ

Leave A Reply