ಬೆಂಗಳೂರಿನ ಜನತೆಗೆ ಬಿಗ್ ರಿಲೀಫ್ | ವಿನೂತನ ಟೆಕ್ನಾಲಜಿ ಮೂಲಕ ಟ್ರಾಫಿಕ್ ಸಮಸ್ಯೆಗೆ ಪರಿಹಾರ!
ಬೆಂಗಳೂರು ಎಂದಾಕ್ಷಣ ನೆನಪಾಗೋದೇ ಟ್ರಾಫಿಕ್. ಇಲ್ಲಿಂದ ಅಲ್ಲಿಗೆ ಹೋಗಬೇಕಾದರೂ ಎಷ್ಟು ಸಮಯ ತೆಗೆದುಕೊಳ್ಳುತ್ತೇ ಅನ್ನೋದೆ ಟೆನ್ಷನ್. ಆದ್ರೆ, ಇದೀಗ ಬೆಂಗಳೂರಿನ ಜನತೆಗೆ ಸ್ವಲ್ಪ ರಿಲೀಫ್ ಸಿಕ್ಕಿದ್ದು, ವಿನೂತನ ತಂತ್ರಜ್ಞಾನ ಬಳಿಸಿಕೊಂಡು ಟ್ರಾಫಿಕ್ ಕಡಿಮೆ ಮಾಡಲು ಚಿಂತನೆ ನಡೆಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿಯವರ ಜೊತೆ ಬೆಂಗಳೂರಿನ ರಸ್ತೆ, ಟ್ರಾಫಿಕ್ ಬಗ್ಗೆ ಚರ್ಚೆ ಮಾಡಿದ್ದೇವೆ. ಬೆಂಗಳೂರು ಹಾಗೂ ಬೆಂಗಳೂರು ಸುತ್ತಾ ಮುತ್ತಲಿನ ರಸ್ತೆ ಬಗ್ಗೆ ಅಥಾರಿಟಿ ರಚಿಸುವ ಬಗ್ಗೆ ತೀರ್ಮಾನ ಮಾಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಒಂದೇ ಫ್ಲೈವರ್ ಮೇಲೆ, ಮೂರು ಫ್ಲೋರ್ ಮಾಡಿ, ಅಲ್ಲಿ ಮೆಟ್ರೋ, ರೋಡ್, ಎಲಿವೇಟೆಡ್ ರೋಪ್ ಮಾಡುವ ಬಗ್ಗೆ ಚರ್ಚೆ ಮಾಡಿದ್ದೇವೆ. ವಿನೂತನ ಟೆಕ್ನಾಲಜಿ ಮೂಲಕ ಟ್ರಾಫಿಕ್ ಸಮಸ್ಯೆ ಬಗೆಹರಿಸುವ ಬಗ್ಗೆ ಚರ್ಚೆ ಮಾಡಿದ್ದೇವೆ. ಬೆಂಗಳೂರು ಮೈಸೂರು ರಸ್ತೆ ಕಾಮಗಾರಿ ಬಗ್ಗೆ ಚರ್ಚೆ ಮಾಡಿದ್ದೇವೆ. ಎಲ್ಲೆಲ್ಲಿ ರಸ್ತೆ ಮಾಡಲು ಸಾಧ್ಯವಿಲ್ಲವೋ ಅಲ್ಲೆಲ್ಲ ಎಲಿವೇಟೆಡ್ ಟ್ರಾನ್ಸ್ಪೋರ್ಟ್ ಮಾಡಲು ಚಿಂತನೆ ನಡೆಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ಹಲವು ಸ್ಥಳಗಳಲ್ಲಿ ರೋಪ್ ವೇ ಮೂಲಕ ಸಂಚಾರಿಸುವ ಬಗ್ಗೆ ಚರ್ಚೆ ನಡೆದಿದೆ. ಈಗಾಗಲೇ ಅದರ ತಂತ್ರಜ್ಞಾನ ಇದೆ. ಬೆಂಗಳೂರಿನಲ್ಲಿ ಕಡಿಮೆ ಭೂಮಿಯನ್ನು ಬಳಕೆ ಮಾಡಿಕೊಂಡು ಒಂದೇ ಜಾಗದಲ್ಲಿ ಸಮರ್ಪಕವಾಗಿ ಬಳಕೆ ಮಾಡಿಕೊಂಡು ಅದನ್ನು ಬೆಂಗಳೂರಿಗೆ ಯಾವ ರೀತಿ ಬಳಸಿಕೊಳ್ಳಬಹುದು ಅಂತ ಚರ್ಚೆ ನಡೆಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಬಗ್ಗೆ ಟೆಕ್ನಿಕಲ್ ತಂಡದ ಜೊತೆ ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಚರ್ಚೆ ನಡೆಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಒಟ್ಟಿನಲ್ಲಿ ಬೆಂಗಳೂರು ಜನರ ಸಮಸ್ಯೆಗೆ ಸದ್ಯದಲ್ಲೇ ಪರಿಹಾರ ಸಿಗಲಿದೆ.