UPSC, KAS, ಬ್ಯಾಂಕಿಂಗ್: ಅಭ್ಯರ್ಥಿಗಳಿಗೆ ಗುಡ್ ನ್ಯೂಸ್

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಯು.ಪಿ.ಎಸ್.ಸಿ., ಕೆ.ಎ.ಎಸ್., ಗ್ರೂಪ್-ಸಿ, ಬ್ಯಾಂಕಿಂಗ್, ಎಸ್.ಎಸ್.ಸಿ., ಆರ್.ಆರ್.ಬಿ ಮತ್ತು ನ್ಯಾಯಾಂಗ ಸೇವಾ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ (ಎಸ್ಸಿ & ಎಸ್ಟಿ) ಅಭ್ಯರ್ಥಿಗಳಿಂದ ಆನೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ., ಕೆ.ಎ.ಎಸ್., ಗ್ರೂಪ್- ಸಿ, ಬ್ಯಾಂಕಿಂಗ್, ಎಸ್.ಎಸ್.ಸಿ., ಆರ್.ಆರ್.ಬಿ ಮತ್ತು ನ್ಯಾಯಾಂಗ ಸೇವಾ ಪರೀಕ್ಷೆಗಳಿಗೆ ಪೂರ್ವಭಾವಿ ತರಬೇತಿ ನೀಡಲು ಉದ್ದೇಶಿಸಿದ್ದು, ಈ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಎಸ್ಸಿ & ಎಸ್ಟಿ ಅಭ್ಯರ್ಥಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ರವರ ಮೂಲಕ ಸಾಮಾನ್ಯ ಪ್ರವೇಶ ನಡೆಸಿ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನಿಗಧಿತ ಗುರಿಗನುಗುಣವಾಗಿ ಆಯ್ಕೆ ಮಾಡಲಾಗುತ್ತದೆ.

ಇದಕ್ಕೆ ಬೇಕಾಗಿರುವ ಅರ್ಹತೆ :

ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ 5 ಲಕ್ಷ ರೂ. ಮೀರಿರಬಾರದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗಧಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 20 ಕೊನೆಯ ದಿನವಾಗಿದ್ದು, ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್ಸೈಟ್ sw.kar.nic.in ನ್ನು ಸಂಪರ್ಕಿಸಬಹುದು ಎಂದು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.