ದ್ವಿತೀಯ PUC ಪೂರಕ ಪರೀಕ್ಷಾ ಫಲಿತಾಂಶ ಸೆ.12 ಕ್ಕೆ ಪ್ರಕಟ : ಬಿಸಿ ನಾಗೇಶ್ ಹೇಳಿಕೆ

ಸೆಪ್ಟೆಂಬರ್ 12ರಂದು ದ್ವಿತೀಯ ಪಿಯುಸಿ( Second PUC) ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮೂಲಕ ಸಚಿವರು ಮಾಹಿತಿ ನೀಡಿದ್ದಾರೆ. ‘ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಸೆಪ್ಟೆಂಬರ್ 12ರಂದು ಪ್ರಕಟಿಸಲಾಗುತ್ತದೆ. ಬೆಳಗ್ಗೆ 11 ಗಂಟೆ ನಂತರ ವೆಬ್‌ಸೈಟ್ http://karresults.nic.in ಲಭ್ಯವಾಗಲಿದೆ’ ಎಂದಿದ್ದಾರೆ.

ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಫಲಿತಾಂಶ 2022: ಪರಿಶೀಲಿಸುವುದು ಹೇಗೆ?

ವಿದ್ಯಾರ್ಥಿಗಳು ಮೊದಲಿಗೆ karresults.nic.in ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
ಫಲಿತಾಂಶದ ಲಿಂಕ್ ಅನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.
ಫಲಿತಾಂಶದ ಲಿಂಕ್ ಅನ್ನು ಪರಿಶೀಲಿಸಿ ಮತ್ತು
ಲಾಗಿನ್ ವಿವರಗಳನ್ನು ನಮೂದಿಸಿ. ನಂತರ, ಸಮ್ಮಿಡ್ ಕೊಡಿ.
ನಿಮ್ಮ ಫಲಿತಾಂಶವು ಪರದೆಯ ಮೇಲೆ ಪ್ರದರ್ಶಿತವಾಗುತ್ತದೆ.
ಫಲಿತಾಂಶವನ್ನು ಪರಿಶೀಲಿಸಿ ಮತ್ತು ಡೌನ್ ಲೋಡ್ ತೆಗೆದಿಟ್ಟುಕೊಳ್ಳಿ.
ಹೆಚ್ಚಿನ ಅಗತ್ಯಕ್ಕಾಗಿ ಅದರ ಹಾರ್ಡ್ ಕಾಪಿಯನ್ನು
ಇರಿಸಿಕೊಳ್ಳಿ.

ಈ ಬಾರಿ ಪಿಯುಸಿ ಪೂರಕ ಪರೀಕ್ಷೆಯನ್ನು ಆಗಸ್ಟ್ 12 ರಿಂದ ಆ.25ರ ವರೆಗೆ ನಡೆಸಲಾಗಿತ್ತು. 2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ

1,85,270ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಪರೀಕ್ಷೆ ಬರೆದಿದ್ದರು. ಈ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ ಎಂದು ತಿಳಿಸಲಾಗಿದೆ.

Leave A Reply

Your email address will not be published.