ರೈತರಿಗೆ ಗುಡ್ ನ್ಯೂಸ್ | ಹೊಸ ರೈತರು ಸೇರಿದಂತೆ 33 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ!

ನವದೆಹಲಿ: ರೈತರಿಗಾಗಿ ಸರ್ಕಾರ ಹೊಸ ಹೊಸ ಯೋಜನೆ ಜಾರಿಗೊಳಿಸುತ್ತಲೇ ಬಂದಿದೆ. ಇದೀಗ  ಹೊಸ ರೈತರಿಗೆ ಮೂರು ಲಕ್ಷ ಸಾಲ ನೀಡುವ ಗುರಿ ಹೊಂದಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.

ದೆಹಲಿಯಲ್ಲಿ ರಾಜ್ಯ ಸಹಕಾರ ಸಚಿವರ ಸಮ್ಮೇಳನದಲ್ಲಿ ಅವರು ಮಾತನಾಡಿ, ಕರ್ನಾಟಕದಲ್ಲಿ 2022 -23ನೇ ಸಾಲಿನಲ್ಲಿ 33 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 24,000 ಕೋಟಿ ರೂ. ಕೃಷಿ ಸಾಲ ವಿತರಿಸುವ ಗುರಿಯಿದ್ದು, ಇದರಲ್ಲಿ ಮೂರು ಲಕ್ಷ ಹೊಸ ರೈತರಿಗೆ ಸಾಲ ನೀಡುವ ಗುರಿ ಹೊಂದಲಾಗಿದೆ ಎಂದರು.

ಅಲ್ಲದೆ, ಸಹಕಾರ ಸಂಘಗಳ ಸದಸ್ಯರು ಮತ್ತು ಕುಟುಂಬದವರಿಗೆ ವೈದ್ಯಕೀಯ ಚಿಕಿತ್ಸೆ ಸೌಲಭ್ಯ ಕಲ್ಪಿಸಲು ಯಶಸ್ವಿನಿ ಆರೋಗ್ಯ ಯೋಜನೆಯನ್ನು ಮತ್ತೆ ಆರಂಭಿಸಲಾಗುತ್ತಿದ್ದು, ಇದಕ್ಕಾಗಿ 300 ಕೋಟಿ ರೂ. ಮೀಸಲಿಡಲಾಗಿದೆ ಎಂದು ಹೇಳಿದ್ದಾರೆ. ಒಟ್ಟಾರೆ ರೈತರ ಮುಖದಲ್ಲಿ ಶೀಘ್ರದಲ್ಲೇ ನಗು ಮೂಡಲಿದೆ.

Leave A Reply

Your email address will not be published.