ಮಂಗಳೂರು ಮಹಾನಗರ ಪಾಲಿಕೆ : ನೂತನ ಮೇಯರ್ ಜಯಾನಂದ ಅಂಚನ್,ಉಪ ಮೇಯರ್ ಪೂರ್ಣಿಮ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪ ಮೇಯರ್ ಆಗಿ ಪೂರ್ಣಿಮ ಆಯ್ಕೆಯಾಗಿದ್ದಾರೆ.

ಶುಕ್ರವಾರ ನಡೆದ ಮೇಯರ್, ಉಪ ಮೇಯರ್ ಹಾಗೂ 4 ಸ್ಥಾಯಿ ಸಮಿತಿ ಸದಸ್ಯರ ಮಹತ್ವದ ಚುನಾವಣೆಯಲ್ಲಿ ಈ ಆಯ್ಕೆ ನಡೆದಿದೆ.

ಮೇಯರ್‌ ಮತ್ತೆ ಸಾಮಾನ್ಯ ಅಭ್ಯರ್ಥಿಗೆ ಹಾಗೂ ಉಪ ಮೇಯರ್ ಸ್ಥಾನವು ಹಿಂದುಳಿದ ವರ್ಗ ಮಹಿಳೆಗೆ ಮೀಸಲಾಗಿತ್ತು. ಪಾಲಿಕೆಯ ಒಟ್ಟು 60 ಸ್ಥಾನಗಳ ಪೈಕಿ ಬಿಜೆಪಿ 44 ಸ್ಥಾನಗಳನ್ನು ಗೆದ್ದುಕೊಂಡಿತ್ತು.

Leave A Reply

Your email address will not be published.