ಬೆಳ್ಳಾರೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಜೀವ ಬೆದರಿಕೆ | 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸುವಂತೆ ಸುಳ್ಯ ಮಂಡಲ ಬಿಜೆಪಿ ಒತ್ತಾಯ

Share the Article

ಬೆಳ್ಳಾರೆ : ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಯಾಗಿರುವ ಶಫೀಕ್ ಎಂಬಾತನ ಸಹೋದರ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು 24 ಗಂಟೆಯೊಳಗೆ ಬಂಧಿಸುವಂತೆ ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಒತ್ತಾಯಿಸಿದ್ದಾರೆ.

ಈ ಕುರಿತು ಈಗಾಗಲೇ ಡಿವೈಎಸ್ಪಿ ಅವರ ಜತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಮನಕ್ಕೆ ತರಲಾಗಿದ್ದು,24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ.

ಆರೋಪಿಯನ್ನು 24 ಗಂಟೆಯಲ್ಲಿ ಬಂಧಿಸದಿದ್ದಲ್ಲಿ ಬಜರಂಗದಳದಿಂದ ಬೆಳ್ಳಾರೆ ಬಂದ್ ಗೆ ಕರೆ

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಆರೋಪಿಯ ಸಹೋದರನಿಂದ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಕರೆ ಬಂದಿದ್ದು ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಲಾಗಿದೆ.
ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಕೂಡಲೇ ಬಂಧಿಸುವುದಾಗಿ ಭರವಸೆ ನೀಡಿದ್ದು
ಆರೋಪಿಯನ್ನು 24 ಗಂಟೆಯೊಳಗೆ ಬಂಧಿಸದಿದ್ದಲ್ಲಿ
ವಿಶ್ವ ಹಿಂದೂ ಪರಿಷತ್ ಬಜರಂಗದಳ ಬೆಳ್ಳಾರೆ ವತಿಯಿಂದ ಬೆಳ್ಳಾರೆ ಬಂದ್ ಗೆ ಕರೆ ನೀಡಿರುವುದಾಗಿ ತಿಳಿದುಬಂದಿದೆ.

Leave A Reply