ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸಿಎಂ ಕಚೇರಿಯಲ್ಲಿ ಉದ್ಯೋಗ | ಜನಸ್ಪಂದನ ಸಮಾವೇಶದಲ್ಲಿ ಮುಖ್ಯಮಂತ್ರಿ ಘೋಷಣೆ
ದೊಡ್ಡಬಳ್ಳಾಪುರ : ರಾಜ್ಯ ಬಿಜೆಪಿ ಸರ್ಕಾರದ ಮೂರು ವರ್ಷಗಳ ಸಾಧನೆಯನ್ನು ಮುಂದಿಟ್ಟುಕೊಂಡು ಬಿಜೆಪಿ ಶಕ್ತಿ ಪ್ರದಶರ್ನಕ್ಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಅದ್ದೂರಿ ಬಿಜೆಪಿ ಜನಸ್ಪಂದನ ಸಮಾವೇಶ ಆಯೋಜನೆ ಮಾಡಿದೆ. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿಗೆ ತೀವ್ರ ಸವಾಲು ಮತ್ತು ಸಂಕಷ್ಟ ತಂದೊಡ್ಡಿದ್ದ ಪ್ರವೀನ್ ನೆಟ್ಟಾರ್ ಪ್ರಕರಣದ ಬಗ್ಗೆ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನೂ ಮುನಿಸಿಕೊಂಡು ಕೂತಿರುವ ಬಿಜೆಪಿ ಕಾರ್ಯಕರ್ತರ ಮತ್ತು ದಕ್ಷಿಣ ಕನ್ನಡದ ಸಾಂಪ್ರದಾಯಿಕ ಹಿಂದು ಕಾರ್ಯಕರ್ತರ ಮುನಿಸು ಕಡಿಮೆ.ಮಾಡುವ ನಿಟ್ಟಿನಲ್ಲಿ ಯೋಜನೆ ಹಾಕಿಕೊಂಡಿದೆ.
ಇನ್ನು ಬಿಜೆಪಿ ಜನಸ್ಪಂದನ ಸಮಾವೇಶದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸಿಎಂ ಕಚೇರಿಯಲ್ಲಿ ಕೆಲಸ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ದ.ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಹತ್ಯೆಗೀಡಾಗಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಕೆಲಸ ನೀಡುವುದಾಗಿ ತಿಳಿಸಿದ್ದಾರೆ.
ಈ ಮೂಲಕ ಮುಂಬರುವ ವಿಧಾನಸಭಾ ಚುಣಾವಣೆ ತಯಾರಿ ನಡೆಸಿದೆ. ಸುಮಾರು 40 ಎಕರೆ ವಿಸ್ತೀರ್ಣದಲ್ಲಿ ಜನಸ್ಪಂದನ ಸಮಾವೇಶ ಆಯೋಜನೆ ಮಾಡಿದ್ದು, 3 ಲಕ್ಷ ಜನರಿಗೆ ಊಟದ ವ್ಯವಸ್ಥೆ ಸುಮಾರು 200 ಎಕರೆ ಪ್ರದೇಶದಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ, ಸರ್ಕಾರಿ ಹಾಗೂ ಖಾಸಗಿ ಸೇರಿದಂತೆ 5 ಸಾವಿರ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಬಿಜೆಪಿ ಮುಂಡರು, ಶಾಸಕರು, ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿ ಹಲವು ಗಣ್ಯರು ಈ ಬೃಹತ್ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.
ಇದೇ ವೇಳೆ ವೇದಿಕೆ ಮೇಲೆ ಭಾಷಣ ಮಾಡಿದ ಸಿಎಂ, ದಾಖಲೆಯ ಸಂಖ್ಯೆಯಲ್ಲಿ ಸೇರಿದ್ದಕ್ಕೆ ನಿಮಗೆ ಅಭಿನಂದನೆ. ಇಲ್ಲಿಂದ ಇಡೀ ರಾಜ್ಯಕ್ಕೆ ಕೇಳಿಸುವಂತೆ ಸಂದೇಶ ನೀಡಿದ್ದೇವೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತೆ ಎಂಬ ಸಂದೇಶ ರವಾನೆ ಆಗಿದೆ. ನೀವು ಇಟ್ಟಿರುವ ವಿಶ್ವಾಸಕ್ಕೆ ನಾವು ದ್ರೋಹ ಮಾಡಲ್ಲ. 2019ರಲ್ಲೇ ಬಿ.ಎಸ್ . ಯಡಿಯೂರಪ್ಪ ಸಿಎಂ ಆಗಬೇಕಿತ್ತು. ಆದರೆ ಕಾಂಗ್ರೆಸ್‌ನ ಹುನ್ನಾರದಿಂದ ಅದು ಕೈತಪ್ಪಿತ್ತು. ಕಾಂಗ್ರೆಸ್‌ನಿಂದ ಬಂದ ಎಲ್ಲ ಶಾಸಕರೂ ವೀರರು ಎಂದು ಸಿಎಂ ಬೊಮ್ಮಾಯಿ ಹೇಳಿದರು.