KSRTC ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್!

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ  ಸಿಬ್ಬಂದಿಗಳಿಗೆ ಸಿಹಿಸುದ್ದಿ ದೊರಕಿದ್ದು, ಇನ್ನು ಮುಂದೆ ಪ್ರತಿ ತಿಂಗಳು 1ನೇ ತಾರೀಕಿನಂದು ವೇತನ ಪಾವತಿಯಾಗಲಿದೆ.

ಈ ಕುರಿತಂತೆ ಕೆ ಎಸ್ ಆರ್ ಟಿ ಸಿಯ ವ್ಯವಸ್ಥಾಪಕ ನಿರ್ದೇಶಕಾರದಂತ ವಿ ಅನ್ಬುಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಅಕ್ಟೋಬರ್ 2022ರಿಂದ ಪ್ರತಿ ತಿಂಗಳು 1ನೇ ತಾರೀಕಿನಂದು ವೇತನ ಪಾವತಿ ಮಾಡುವ ಉಪ ಕ್ರಮವನ್ನು ಜಾರಿಗೆ ತರಲಾಗುತ್ತಿದೆ.

ಈ ನಿಟ್ಟಿನಲ್ಲಿ ಅಕ್ಟೋಬರ್ 2022ರ ತಿಂಗಳಿನಿಂದ ಪ್ರಪ್ರಥಮ ಬಾರಿಗೆ ಚಾಲಕ, ನಿರ್ವಾಹಕ, ತಾಂತ್ರಿಕ ಸಿಬ್ಬಂದಿಗಳು ಸೇರಿದಂತೆ ಸಮಸ್ತ ಸಿಬ್ಬಂದಿಗಳಿಗೆ ಪ್ರತಿ ತಿಂಗಳ ದಿನಾಂಕ 1ರಂದೇ ವೇತನವನ್ನು ಪಾವತಿ ಮಾಡಲು ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

ಇನ್ನೂ ಈ ಕ್ರಮಕ್ಕೆ ಸಂಬಂಧಿಸಿದಂತೆ ಸಿಬ್ಬಂದಿಗಳ ವೇತನ ಬಿಲ್ಲುಗಳನ್ನು ತಯಾರಿಸುವಾಗ ಹಾಜರಾತಿ, ರಜೆ ಮಂಜೂರಾತಿ ಆದೇಶ, ಹೆಚ್ಚುವರಿ ಭತ್ಯೆ ಮುಂತಾದ ದಾಖಲಾತಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ, ವೇತನದ ಬಿಲ್ಲನ್ನು ಸಿದ್ದಪಡಿಸುವಂತೆ ತಿಳಿಸಿದ್ದಾರೆ. ಈ ಮೂಲಕ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ದೊರೆತಿದೆ.

Leave A Reply

Your email address will not be published.