2 ನೇ ಕ್ಲಾಸ್ ನ ಪುಟ್ಟ ಬಾಲಕಿಯ ಮೇಲೆರಗಿದ 25 ರ ಹರೆಯದ ಕಾಮಾಂಧ ! ಆರೋಪಿ ಬಂಧನ

2ನೇ ತರಗತಿ ಓದುತ್ತಿರುವ ಪುಟ್ಟ ಬಾಲಕಿಯ ಮೇಲೆ ವಿಕೃತ ಕಾಮಿಯೊಬ್ಬ ಅತ್ಯಾಚಾರ ಮಾಡಿರುವ ಘಟನೆಯೊಂದು ನಡೆದಿದೆ. ಈ ಪುಟ್ಟ ವಿದ್ಯಾರ್ಥಿನಿಯ ಮೇಲೆ ಆಕೆಯ ಗ್ರಾಮದ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದಾನೆ. ಈ ಘಟನೆ ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ನಡೆದಿದೆ.

 

ರೋಹಿತ್ ಚೌಹಾಣ್ ಎಂಬ 25 ವರ್ಷದ ಯುವಕನೇ 7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿ. ಆತ ಬಾಲಕಿಯನ್ನು ತನ್ನ ಬೈಕ್‍ನಲ್ಲಿ ಕಿಡ್ನ್ಯಾಪ್‌ ಮಾಡಿ ಮನೆಗೆ ಕರೆದೊಯ್ದಿದ್ದಾನೆ. ನಂತರ ತನ್ನ ಮನೆಯಲ್ಲಿ ಆ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ.

ಘಟನೆಗೆ ಸಂಬಂಧಿಸಿ ಬಾಲಕಿಯ ಕುಟುಂಬಸ್ಥರು ನಾಗ್ರಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಪೋಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ರೋಹಿತ್ ಚೌಹಾಣ್‍ನನ್ನು ಬಂಧಿಸಿದ್ದಾರೆ.

Leave A Reply

Your email address will not be published.