ಹಿಂದೂ ಕಾರ್ಯಕರ್ತನಿಗೆ ಪ್ರವೀಣ್ ನೆಟ್ಟಾರ್ ಕೊಲೆ ಆರೋಪಿಯ ಸಹೋದರನಿಂದ ಕೊಲೆ ಬೆದರಿಕೆ, ಆರೋಪಿ ಸಫೀದ್ ಬಂಧನ

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಯೊಬ್ಬನ ತಮ್ಮನ ಬಂಧನವಾಗಿದೆ.

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಯಾಗಿರುವ ಶಫೀಕ್ ಎಂಬಾತನ ಸಹೋದರ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.

ಹಿಂದೂ ಸಂಘಟನೆಯ ಕಾರ್ಯಕರ್ತ ಹಾಗೂ ಬೆಳ್ಳಾರೆಯ ಅಮ್ಮು ರೈ ಕಾಂಪ್ಲೆಕ್ಸ್ ನ ಮ್ಯಾನೇಜರ್ ಪ್ರಶಾಂತ್ ರೈ ಎಂಬವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಶಫೀಕ್ ಸಹೋದರ, ಸಫೀದ್ ಜೀವ ಬೆದರಿಕೆ ಒಡ್ಡಿದ್ದು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಶನಿವಾರ ಸಂಜೆ ಪ್ರಶಾಂತ್ ರೈಯವರಿಗೆ ಕರೆ ಮಾಡಿರುವ ಸಫ್ರಿದ್ ಅವಾಚ್ಯ ಶಬ್ಧಗಳಿಂದ ನಿಂದಿಸಿರುವುದಾಗಿಯೂ , ಕೊಲ್ಲುವುದಾಗಿ ಬೆದರಿಸಿರುವುದಾಗಿಯೂ ಆರೋಪಿಸಲಾಗಿದೆ.
ಪ್ರಶಾಂತ್ ಅವರು ಠಾಣೆಗೆ ದೂರು ನೀಡಿದ್ದರು. ಇದೀಗ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.

ನಿನ್ನೆ ಬೆದರಿಕೆ ನೀಡಿದ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳು ಪೋಲಿಸ್ ಠಾಣೆಯ ಮುಂದೆ ಪ್ರತಿಪಡಸಿ 24 ಗಂಟೆಗಳ ಒಳಗೆ ಆರೋಪಿಯನ್ನು ಬಂಧಿಸಬೇಕೆಂದು ಪ್ರತಿಭಟಿಸಿದ್ದರು.

Leave A Reply

Your email address will not be published.