ಸಾವಿರಾರು ನಕ್ಷತ್ರ ಆಮೆಗಳ ಮಾರಾಟಕ್ಕೆ ಪ್ರಯತ್ನ | ನಾಲ್ವರ ಬಂಧನ

Share the Article

ಬೆಂಗಳೂರು: ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಆರ್.ಎಂ.ಸಿ ಯಾರ್ಡ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಕಲ್ಯಾಣ್, ಸಿಂಹಾದ್ರಿ, ಇಸಾಕ್ ಹಾಗೂ ರಾಜಪುತ್ರ ಬಂಧಿತ ಆರೋಪಿಗಳು.

ಬೆಂಗಳೂರಿನ ನಾನಾ ಭಾಗಗಳಿಗೆ ಆಮೆಗಳನ್ನು ಮಾರಾಟ ಮಾಡ್ತಿದ್ದ ಆರೋಪಿಗಳು ತುಮಕೂರು ರಸ್ತೆಯ ಗೊರಗುಂಟೆಪಾಳ್ಯ ಬಸ್ ನಿಲ್ದಾಣದ ಬಳಿ ಕೃತ್ಯಕ್ಕೆ ಯತ್ನಿಸುತ್ತಿದ್ದಾಗ ಆರ್.ಎಂ.ಸಿ ಯಾರ್ಡ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 1132 ನಕ್ಷತ್ರ ಆಮೆಗಳನ್ನು ವಶಕ್ಕೆ ಪಡೆಯಲಾಗಿದೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಆಮೆಗಳನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ.

Leave A Reply