ಹೋಟೆಲ್ ನಲ್ಲಿ ಭಾರೀ ಅಗ್ನಿ ಅವಘಡ | ಬೆಂಕಿಯ ಕೆನ್ನಾಲಿಗೆಗೆ ಬೆಂದ 6 ಜೀವ, 10 ಜನ ಗಂಭೀರ

ಹೋಟೆಲೊಂದರಲ್ಲಿ ಭೀಕರ ಅಗ್ನಿ ದುರಂತವೊಂದು ಸಂಭವಿಸಿದ್ದು, ಈ ದುರ್ಘನೆಯಲ್ಲಿ ಮಹಿಳೆಯೋರ್ವರು ಸೇರಿದಂತೆ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾಗೂ 10 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೈದಾರಾಬಾದ್ ನ ಸಿಕಂದರಾಬಾದ್ ನಲ್ಲಿ ನಡೆದಿದೆ.

ಈ ಘಟನೆ ಹೈದರಾಬಾದ್ ನ ಸಿಕಂದರಾಬಾದ್ ನ ರೂಬಿ ಹೋಟೆಲ್ ಕಟ್ಟಡದ ಗ್ರೌಂಡ್ ಫ್ಲೋರ್ ನಲ್ಲಿನ ರೂಬಿ ಎಲೆಕ್ಟ್ರಿಕ್ ವೆಹಿಕಲ್ ಶೋರಂ ನಲ್ಲಿ ಬ್ಯಾಟರಿ ಸ್ಪೋಟಗೊಂಡು, ಕಟ್ಟಡಕ್ಕೆ ಬೆಂಕಿ ವ್ಯಾಪಿಸಿದೆ. ಈ ಬೆಂಕಿಯ ಕೆನ್ನಾಲಿಗೆಗೆ ಹೋಟೆಲ್ ನಲ್ಲಿದ್ದ ಮಹಿಳೆ ಸೇರಿದಂತೆ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


Ad Widget

Ad Widget

Ad Widget

Ad Widget

Ad Widget

Ad Widget

Ad Widget

ಹೋಟೆಲ್ ನಲ್ಲಿ 25 ಪ್ರವಾಸಿಗರು ತಂಗಿದ್ದರು ಎನ್ನಲಾಗಿದ್ದು, ಈ ಪೈಕಿ 6 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಹಲವರನ್ನು ಹೋಟೆಲ್ ನಿಂದ ರಕ್ಷಣಾ ಸಿಬ್ಬಂದಿ ರಕ್ಷಿಸಿದ್ದಾರೆ. 2 ಅಗ್ನಿ ಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

error: Content is protected !!
Scroll to Top
%d bloggers like this: