Scholarship Scheme : 8 ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ ರೂ.6000 ಸ್ಕಾಲರ್ಶಿಪ್ | ಅರ್ಜಿ ಸಲ್ಲಿಸಲು ಇಲ್ಲಿದೆ ವಿಧಾನ

ಪ್ರತಿ ಪೋಷಕರು ತಮ್ಮ ಮಕ್ಕಳ ಭವಿಷ್ಯ ರೂಪಿಸುವ ಕನಸು ಹೊತ್ತು ಉತ್ತಮ ವ್ಯಾಸಂಗ ನೀಡಿ ಅವರ ಉಜ್ವಲ ಭವಿಷ್ಯಕ್ಕೆ ನಾಂದಿಯಾಗಲೂ ಕಾರಣರಾಗುತ್ತಾರೆ. ಭಾರತದಲ್ಲಿ ಪ್ರತಿ ವರ್ಷ ಕೋಟಿಗಟ್ಟಲೆ ಮಕ್ಕಳು ಶಾಲೆಗೆ ಪ್ರವೇಶ ಪಡೆದು ತಮ್ಮ ಭವಿಷ್ಯಕ್ಕೆ ಅಡಿಪಾಯ ಹಾಕುತ್ತಾರೆ.

ಆದರೆ, ಕೆಲ ವಿದ್ಯಾರ್ಥಿಗಳಿಗೆ ಶಾಲೆ, ಓದು ಎಲ್ಲವೂ ಕನಸಿನ ಮಾತಾಗಿದೆ. ಅವರ ಮನೆಯ ಆರ್ಥಿಕ ಪರಿಸ್ಥಿತಿ, ಓದುವ ಕನಸಿಗೆ ಮುಳ್ಳಾಗಿ ಪರಿಣಮಿಸಿರುವುದು ವಿಪರ್ಯಾಸ. ಸರ್ಕಾರ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಉಚಿತ ಶಿಕ್ಷಣದ ಸೌಲಭ್ಯ ನೀಡಿ ಪ್ರೋತ್ರಾಹಿಸುತ್ತಿದರೂ ಕೂಡ ಕೆಲ ಮಕ್ಕಳು ಮನೆಯಲ್ಲೇ ಉಳಿಯುತ್ತಿರುವ ಪ್ರಕರಣಗಳೇ ಹೆಚ್ಚು.

ಅಷ್ಟೇ ಅಲ್ಲದೇ ಸರ್ಕಾರಿ ಶಾಲೆಗಳಲ್ಲಿ ಪೂರಕ ವುವಸ್ಥೆಗಳಿಲ್ಲ ಎಂಬ ತಪ್ಪು ಕಲ್ಪನೆಯೂ ಜೊತೆಗೂಡಿ ಪೋಷಕರು ಪ್ರೈವೇಟ್ ಶಾಲೆಗಳಿಗೆ ಸೇರಿಸುತ್ತಿರುವುದು ಎಲ್ಲರಿಗೂ ತಿಳಿದಿದೆ. ಇತ್ತೀಚಿನ ದಿನಗಳಲ್ಲಿ ಅನೇಕ ಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ಬಂದು ತಲುಪಿದೆ. ಹಣಕಾಸಿನ ಸಮಸ್ಯೆಯಿಂದ ಯಾವುದೇ ಮಗು ತನ್ನ ಅಧ್ಯಯನವನ್ನು ಬಿಡದಂತೆ ಸರ್ಕಾರವು ಪ್ರತಿ ವರ್ಷ ರಾಷ್ಟ್ರೀಯ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿವೇತನ (National Means Cum Merit Scholarship) ವನ್ನು ಕೇಂದ್ರ ಸರ್ಕಾರವು ವಿದ್ಯಾರ್ಥಿವೇತನವನ್ನು ನೀಡುತ್ತಿದೆ.

ರಾಷ್ಟ್ರೀಯ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿವೇತನಕ್ಕೆ ಅರ್ಹತೆ

ರಾಜ್ಯ ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಸ್ಥಳೀಯ ಸಂಸ್ಥೆಗಳ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. ರಾಷ್ಟ್ರೀಯ ಮೀನ್ಸ್ ಕಮ್ ಮೆರಿಟ್ ಸ್ಕಾಲರ್‌ಶಿಪ್‌ನ ಮುಖ್ಯ ಉದ್ದೇಶವೆಂದರೆ 8 ನೇ ತರಗತಿಯ ನಂತರ ವಿದ್ಯಾರ್ಥಿಗಳು ಅಧ್ಯಯನದಲ್ಲಿ ಬಿಡುವುದನ್ನು ಕಡಿಮೆ ಮಾಡುವ ಉದ್ದೇಶದಿಂದ , 8 ನೇ ತರಗತಿಯ ಫಲಿತಾಂಶ ಪ್ರಕಟವಾದ ನಂತರ ವಿದ್ಯಾರ್ಥಿಗಳು ನಾಷನಲ್ ಮೀನ್ ಕಮ್ ಮೆರಿಟ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು. 9 ಮತ್ತು 10 ನೇ ತರಗತಿಯ ವ್ಯಾಸಂಗಕ್ಕಾಗಿ ಆರ್ಥಿಕವಾಗಿ ದುರ್ಬಲವಾಗಿರುವ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.

ರಾಷ್ಟ್ರೀಯ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿವೇತನದ ಮಾನದಂಡ

ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು 8 ನೇ ತರಗತಿಯಲ್ಲಿ ಕನಿಷ್ಠ 55 ಪ್ರತಿಶತ ಅಂಕಗಳನ್ನು ಪಡೆದಿರುವುದು ಕಡ್ಡಾಯವಾಗಿದೆ. ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ಕುಟುಂಬದ ಆದಾಯವು 1.5 ಲಕ್ಷ ರೂ.ಗಳನ್ನು ಮೀರಬಾರದು. 10ನೇ ತರಗತಿಯ ನಂತರ ಈ ಸ್ಕಾಲರ್‌ಶಿಪ್‌ಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು 9ನೇ ತರಗತಿಯಲ್ಲಿ ಕನಿಷ್ಠ ಶೇಕಡಾ 55 ಅಂಕಗಳನ್ನು ಹೊಂದಿರುವುದು ಕಡ್ಡಾಯವಾಗಿದೆ.

ಈ ವಿದ್ಯಾರ್ಥಿವೇತನದ ಅಡಿಯಲ್ಲಿ ಪ್ರತಿ ವರ್ಷ ವಿದ್ಯಾರ್ಥಿಗಳಿಗೆ 6000 ರೂ ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ. ಅವರ ಖಾತೆಗೆ ಪ್ರತಿ ತಿಂಗಳು 500 ರೂ. ಯಾವುದೇ ಕೇಂದ್ರ ಅಥವಾ ರಾಜ್ಯ ಸರ್ಕಾರವು ನೀಡುತ್ತಿರುವ ಸ್ಕಾಲರ್‌ಶಿಪ್ ಯೋಜನೆಯ ಪ್ರಯೋಜನವನ್ನು ಈಗಾಗಲೇ ಪಡೆಯುತ್ತಿರುವ ವಿದ್ಯಾರ್ಥಿಗಳು ಅದಕ್ಕೆ ಅರ್ಜಿ ಸಲ್ಲಿಸುವಂತಿಲ್ಲ.

ಪ್ರಾಥಮಿಕ ಅಗತ್ಯ ಮಾಹಿತಿ/ಅರ್ಜಿ ಸಲ್ಲಿಸಲು ಬೇಕಾಗಿರುವ ಮಾಹಿತಿ

ಇ-ಮೇಲ್ ವಿಳಾಸ,ಆಧಾರ್ ಕಾರ್ಡ್‌ ಅಥವಾ ಆಧಾರ್‌ ಎನ್‌ರೋಲ್‌ಮೆಂಟ್‌ ನಂಬರ್, ಮೊಬೈಲ್ ನಂಬರ್, ಸ್ಕ್ಯಾನ್‌ ಮಾಡಿದ ಎಲ್ಲಾ ಶೈಕ್ಷಣಿಕ ಮತ್ತು ಮೂಲ ದಾಖಲೆಗಳ ಸ್ಕ್ಯಾನ್‌ ಕಾಪಿ, ಬ್ಯಾಂಕ್‌ ಖಾತೆಯ ವಿವರ

ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
1- ಅರ್ಜಿ ಸಲ್ಲಿಸಲು, NMMSS ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
2- ನ್ಯಾಷನಲ್ ಮೀನ್ಸ್ ಕಮ್ ಮೆರಿಟ್ ಸ್ಕಾಲರ್‌ಶಿಪ್‌ನ ಒಂದು ವಿಭಾಗವು ಸೈಟ್‌ನ ಮುಖಪುಟದಲ್ಲಿ ಕಾಣಿಸುತ್ತದೆ.
3- ಈ ವಿಭಾಗದ ಮೇಲೆ ಕ್ಲಿಕ್ ಮಾಡಿದ ನಂತರ, ವಿದ್ಯಾರ್ಥಿಯು ಹಿಂದಿನ ತರಗತಿಯ ಅಂಕಪಟ್ಟಿ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ವಿವರಗಳನ್ನು ನಮೂದಿಸಬೇಕಾಗುತ್ತದೆ.
4- ಪೋರ್ಟಲ್‌ನಲ್ಲಿ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿದ ನಂತರ, ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ OTP ಬರುತ್ತದೆ. ಈ OTP ಅನ್ನು ಭರ್ತಿ ಮಾಡಿ ಮತ್ತು ಸಲ್ಲಿಸು ಕ್ಲಿಕ್ ಮಾಡಿ.

ಮಕ್ಕಳ ಭವಿಷ್ಯದ ದೃಷ್ಟಿಯಿಂದ ಈ ಯೋಜನೆಯು ಅತಿ ಉಪಕಾರಿಯಾಗಿದ್ದು, ಆರ್ಥಿಕವಾಗಿ ಸಂಕಷ್ಟ ದಲ್ಲಿ ಇರುವವರು ವಿದ್ಯೆಯಿಂದ ವಂಚಿತರಾಗುವುದನ್ನು ತಪ್ಪಿಸುತ್ತದೆ.

Leave A Reply

Your email address will not be published.