ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ಲಿಫ್ಟ್ ಅವಘಡ | ಎಂಟು ಕಾರ್ಮಿಕರು ಸಾವು, ಹಲವರಿಗೆ ಗಾಯ

ನಿರ್ಮಾಣ ಹಂತದಲ್ಲಿರುವ ಕಟ್ಟಡದ ಲಿಫ್ಟ್ ಕುಸಿದು ಎಂಟು ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ದುರಂತ ಘಟನೆ ನಡೆದಿದ್ದು, ಹಲವು ಜನರು ಈ ಭೀಕರ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದಾರೆ.


Ad Widget

Ad Widget


Ad Widget

ಈ ದುರ್ಘಟನೆ ಗುಜರಾತ್​ನ ಅಹ್ಮದಾಬಾದ್​ನಲ್ಲಿ ನಡೆದಿದ್ದು,​ ವಿಶ್ವವಿದ್ಯಾಲಯದ ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ಲಿಫ್ಟ್ ಅಪ್ಪಳಿಸಿದ ಪರಿಣಾಮ ಈ ಅವಘಡ ಸಂಭವಿಸಿದೆ.

ಬಹು ಮಹಡಿ ಕಟ್ಟಡದಲ್ಲಿ ಲಿಫ್ಟ್ ಅಳವಡಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದ್ದು, ಎಂಟು ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ನಡೆದಿದೆ. ತಕ್ಷಣ ಸ್ಥಳಕ್ಕೆ ಧಾವಿಸಿ ಬಂದ ಅಗ್ನಿಶಾಮಕ ದಳ ರಕ್ಷಣಾ ಕಾರ್ಯಾಚರಣೆ ನಡೆಸಿತ್ತು. ಆದರೂ ಕಾರ್ಮಿಕರನ್ನು ಬದುಕಿಸಲು ಸಾಧ್ಯವಾಗಲಿಲ್ಲ.

Ad Widget

Ad Widget

Ad Widget

ಕಟ್ಟಡ ಕುಸಿತದ ಸುದ್ದಿ ತಿಳಿಯುವುದೇ ತಡವಾಗಿದ್ದು ಮಧ್ಯಾಹ್ನ 1 ಗಂಟೆಯ ಹೊತ್ತಿಗೆ ತುರ್ತು ನಿರ್ವಹಣಾ ದಳ ಸ್ಥಳಕ್ಕೆ ಆಗಮಿಸಿದೆ ಎಂದು ವರದಿಯಾಗಿದೆ. ಅಲ್ಲದೇ ಕಟ್ಟಡ ನಿರ್ಮಾಣ ಸಂಸ್ಥೆಯ ವತಿಯಿಂದಲೂ ಯಾವುದೇ ಮಾಹಿತಿಯನ್ನು ರವಾನಿಸಿರಲಿಲ್ಲ ಎಂದು ಹೇಳಲಾಗಿದೆ. ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

error: Content is protected !!
Scroll to Top
%d bloggers like this: