ಸಹಾಯಕ ಪ್ರಾಧ್ಯಾಪಕರ ನೇಮಕಾತಿ | ಮೆರಿಟ್ ಪಟ್ಟಿಯನ್ನು ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA)

ಬೆಂಗಳೂರು : ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿ ಸಂಬಂಧಿಸಿದಂತೆ ಆಯ್ಕೆಯಾದವರ ಮೆರಿಟ್ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಪ್ರಕಟಿಸಿದೆ.

ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯ ಮೆರಿಟ್ ಪಟ್ಟಿ ಬಿಡುಗಡೆಗೊಳಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪರ್ಧಾತ್ಮಕ ಪರೀಕ್ಷೆಯು ಮಾರ್ಚ್‌ 12ರಿಂದ 16ರವರೆಗೆ 26 ವಿವಿಧ ವಿಷಯಗಳಿಗೆ ನಡೆದಿತ್ತು. ಆದರೆ ಇಲ್ಲಿ ಸಹ ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಿ ಕೆಲವರು ಸಿಕ್ಕಿಬಿದ್ದಿದ್ದರು. ಇದಾದ ಬಳಿಕ ಆ ಅಭ್ಯರ್ಥಿಗಳ ಫಲಿತಾಂಶ ತಡೆ ಹಿಡಿದು ಉಳಿದವರ ಪಟ್ಟಿ ಬಿಡುಗಡೆ ಮಾಡಲಾಗಿದೆ. ಕೆಲವು ಅಭ್ಯರ್ಥಿಗಳು ಸಮಾನ ಅಂಕಗಳನ್ನು ಪಡೆದಿರುವುದರಿಂದ ಅವರ ಜನ್ಮದಿನಾಂಕ ಕೂಡ ಒಂದೇ ಆಗಿರುವುದರಿಂದ 9 ವಿಷಯಗಳ ಪಟ್ಟಿ ತಡೆ ಹಿಡಿದಿದೆ.

ಈ ಕುರಿತು ಸ್ಪಷ್ಟ ಮಾರ್ಗಸೂಚಿಗಳನ್ನು ಸ್ವೀಕರಿಸಿದ ನಂತರ ಅಂತಿಮ ಮೆರಿಟ್ ಪಟ್ಟಿ ಬಿಡುಗಡೆ ಮಾಡುವುದಾಗಿ ಕೆಇಎ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ http:/kea.kar.nic.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.

Leave A Reply

Your email address will not be published.