ಶಿಕ್ಷಕರ ನೇಮಕಾತಿಯಲ್ಲಿ ದೈಹಿಕ ಶಿಕ್ಷಕರನ್ನು ಕಡೆಗಣಿಸಿದ ಹಿನ್ನೆಲೆ!! ಖೇಲ್ ಕರ್ನಾಟಕ ವತಿಯಿಂದ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆಗೆ ಕರೆ

ಬೆಂಗಳೂರು: ರಾಜ್ಯ ಶಿಕ್ಷಣ ಇಲಾಖೆ ಹಾಗೂ ಶಿಕ್ಷಣ ಸಚಿವಾಲಯದ ಆದೇಶದಂತೆ ಶಿಕ್ಷಕರ ನೇಮಕಾತಿಗೆ ಕರೆ ನೀಡಲಾಗಿದ್ದು, ಇದರಲ್ಲಿ ದೈಹಿಕ ಶಿಕ್ಷಕರನ್ನು ಕಡೆಗಣಿಸಲಾಗಿದೆ ಎನ್ನುವ ಗಂಭೀರ ಆರೋಪವೊಂದು ಕೇಳಿ ಬಂದ ಬೆನ್ನಲ್ಲೇ ರಾಜ್ಯ ಮಟ್ಟದ ಪ್ರತಿಭಟನೆಗೆ ಕರೆ ನೀಡಲಾಗಿದೆ.

ಖೇಲ್ ಕರ್ನಾಟಕ ದೈಹಿಕ ಶಿಕ್ಷಣ ಮತ್ತು ಕ್ರೀಡಾ ಸಂಘ(ರಿ)ವತಿಯಿಂದ ನಾಳೆ ಸೆ.15 ರಂದು ಮುಂಜಾನೆಯಿಂದ ಸಂಜೆಯವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಕಳೆದ ಕೆಲ ವರ್ಷಗಳಿಂದ ಪ್ರಾಥಮಿಕ ಹಾಗೂ ಪ್ರೌಢ ವಿಭಾಗಗಳಲ್ಲಿ ಶಿಕ್ಷಕರ ನೇಮಕವಾಗುತ್ತಿದ್ದರೂ, ಈ ವರೆಗೆ ದೈಹಿಕ ಶಿಕ್ಷಕರನ್ನು ನೇಮಿಸುವ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ.

ಕೂಡಲೇ ಈ ಬಾರಿಯ ನೇಮಕಾತಿಯಲ್ಲಿ ದೈಹಿಕ ಶಿಕ್ಷಕರನ್ನು ಪರಿಗಣಿಸಬೇಕು ಎಂದು ಒತ್ತಾಯಿಸುವ ಸಲುವಾಗಿ ಈ ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದು ಸಂಘಟಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.