KPSC Recruitment 2022 : ಸಹಾಯಕ ನಿರ್ದೇಶಕರು ಹುದ್ದೆಗಳಿಗೆ ಇಂದಿನಿಂದ ಅರ್ಜಿ ಆಹ್ವಾನ | ಆಸಕ್ತರು ಅರ್ಜಿ ಸಲ್ಲಿಸಿ

ಕರ್ನಾಟಕ ಲೋಕಸೇವಾ ಆಯೋಗವು ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.  ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಹುದ್ದೆ :  10 ಸಹಾಯಕ ನಿರ್ದೇಶಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಸೆಪ್ಟೆಂಬರ್ 15,2022 ರಿಂದ ಅಕ್ಟೋಬರ್ 14, 2022 ರೊಳಗೆ ಅರ್ಜಿಯನ್ನು ಹಾಕಬಹುದು.

ವಿದ್ಯಾರ್ಹತೆ : ಈ ಹುದ್ದೆಗಳಿಗನುಸಾರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಆದ್ಯತೆಯನ್ನು ನೀಡಲಾಗುವುದು.

ವಯೋಮಿತಿ:  ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 43,100/- ರಿಂದ 83,900/ ರೂಗಳ ವರೆಗೆ ವೇತನ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು. ಎಂದು

ಆಯ್ಕೆ ಪ್ರಕ್ರಿಯೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಸ್ಪರ್ಧಾತ್ಮಕ ಪರೀಕ್ಷೆ ಮೂಲ ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 600/-ರೂ, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 300/-ರೂ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50/-ರೂ ಅರ್ಜಿ ಶುಲ್ಕವನ್ನು ಅಕ್ಟೋಬರ್ 15,2022ರೊಳಗೆ ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

ಅರ್ಜಿ ಸಲ್ಲಿಕೆ : ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://www.kpsc.kar.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಬೇಕು. ನಂತರ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಸೆಪ್ಟೆಂಬರ್ 15,2022 ರಿಂದ ಅಕ್ಟೋಬರ್ 14,2022ರೊಳಗೆ ರೊಳಗೆ ಅರ್ಜಿಯನ್ನು ಹಾಕಬಹುದು.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave A Reply

Your email address will not be published.