BIGG NEWS: ‘ಅಕ್ರಮ ಸಕ್ರಮ’ ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಮತ್ತೊಂದು ಸಿಹಿಸುದ್ದಿ

ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಭೂರಹಿತರು ಮತ್ತು ಸಣ್ಣ ರೈತರ ಜಮೀನುಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಒಂದು ವರ್ಷಗಳ ವಿಸ್ತರಣೆ ಮಾಡುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ.

ಅಕ್ರಮ-ಸಕ್ರಮದ ಕುರಿತಂತೆ ಕಂದಾಯ ಇಲಾಖೆಯ ತಿದ್ದುಪಡಿ ವಿಧೇಯಕವನ್ನು ಇಂದು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದ್ದು, 94 ಎ ತಿದ್ದುಪಡಿ ಮೂಲಕ ನಮೂನೆ 57 ರಲ್ಲಿ ಅರ್ಜಿ ಸಲ್ಲಿಸಿ ಸರ್ಕಾರಿ ಭೂಮಿಯಲ್ಲಿ ನಡೆಸುತ್ತಿರುವ ಅಕ್ರಮ ಸಾಗುವಳಿಯನ್ನು ಸಕ್ರಮಗೊಳಿಸಲು ಅವಕಾಶವಿದೆ. ಆದರೆ ಈ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಮತ್ತೆ ಒಂದು ವರ್ಷದ ಅವಧಿಗೆ ವಿಸ್ತರಣೆ ಮಾಡುವುದಕ್ಕೆ ಸರ್ಕಾರ ನಿರ್ಧರಿಸಿದೆ.

ಈ ಕಾಯಿದೆಯ ಅನುಸಾರ, ಯಾವುದೇ ವ್ಯಕ್ತಿ ತನ್ನ ಸ್ವಾಧೀನಕ್ಕೆ ಒಳಪಟ್ಟ ಭೂಮಿಯನ್ನು ಸಕ್ರಮಗೊಳಿಸಿಕೊಳ್ಳುವುದಕ್ಕೆ ಗೊತ್ತುಪಡಿಸಿದ ಅರ್ಹತೆ ಹೊಂದಿದ್ದರೆ ಕಾಯಿದೆ ಜಾರಿಗೆ ಬಂದ ದಿನದಿಂದ ಒಂದು ವರ್ಷದ ಅವಧಿಯಲ್ಲಿ ನಿಯಮ 67 ರ ಅನ್ವಯ ಸೂಕ್ತ ಶುಲ್ಕದೊಂದಿಗೆ ಅರ್ಜಿ ಸಲ್ಲಸಬೇಕಾಗುತ್ತದೆ. ಸಮಿತಿ ಅಕ್ರಮ– ಸಕ್ರಮವನ್ನು ನಿರ್ಧರಿಸುತ್ತದೆ.

ಪ್ರತಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಅಕ್ರಮ ಸಕ್ರಮಕ್ಕೆ ಐವರು ಸದಸ್ಯರನ್ನು ಒಳಗೊಂಡ ಸಮಿತಿ ರಚನೆ ಮಾಡಲಾಗುತ್ತದೆ. ಶಾಸಕರು ಇದರ ಭಾಗವಾಗಿರುತ್ತಾರೆ. ತಹಶೀಲ್ದಾರ್ ಕಾರ್ಯದರ್ಶಿಯಾಗಿರುತ್ತಾರೆ. ತಾಲೂಕಿಗೆ ಒಂದಕ್ಕಿಂತ ಹೆಚ್ಚು ಸಮಿತಿ ರಚನೆ ಮಾಡುವುದು ಅಗತ್ಯ ಎಂದು ಕಂಡು ಬಂದರೆ ಹೆಚ್ಚುವರಿ ನೇಮಕ ಮಾಡಲಾಗುತ್ತದೆ.

Leave A Reply

Your email address will not be published.