Good News : ಸರಕಾರಿ ಪ್ರಾಥಮಿಕ, ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ಸರಕಾರದಿಂದ ಗೌರವ ಸಂಭಾವನೆ ಬಿಡುಗಡೆ!!!

2022-23ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ನೇಮಿಸಲಾಗಿರುವ ಬೋಧಕ ಸಿಬ್ಬಂದಿ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗುತ್ತದೆ. ಕರ್ತವ್ಯ ನಿರ್ವಹಿಸುತ್ತಿರುವ ಈ ಅತಿಥಿ ಶಿಕ್ಷಕರ ಸಂಭಾವನೆಗಾಗಿ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ.
ಈ ಸಂಬಂಧ ಆರ್ಥಿಕ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ನಡವಳಿ ಹೊರಡಿಸಿದೆ.

ರಾಜ್ಯದ ತಾಲೂಕು ಪಂಚಾಯ್ತಿ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ 2022-23ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ಭರ್ತಿ ಮಾಡಿರುವ ಶಿಕ್ಷಕ ಹುದ್ದೆಗಳ , ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಸಂಭಾವನೆಗಾಗಿ 17,505.23 ಲಕ್ಷಗಳನ್ನು ಬಿಡುಗಡೆ ಮಾಡಲು ಸರ್ಕಾರ ಆದೇಶ ಹೊರಡಿಸಿದೆ.

ಈ ಅನುದಾನವನ್ನು ಪ್ರಸ್ತಾವಿತ ಉದ್ದೇಶಕ್ಕಾಗಿ ಆದ್ಯತೆಯ ಮೇಲೆ ಖರ್ಚು ಮಾಡಬೇಕು. ಅಲ್ಲದೆ ಬಿಡುಗಡೆಗೊಳಿಸಿದ ಅನುದಾನದ ಮೊತ್ತ ತಾಲೂಕು ಪಂಚಾಯ್ತಿ ಅಥವಾ ಅನುಷ್ಠಾನಾಧಿಕಾರಿಗಳ ಹಂತದಲ್ಲಿ ವಿಳಂಬಗೊಳಿಸಿದರೆ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.

Leave A Reply

Your email address will not be published.