8ನೇ ತರಗತಿ SC-ST ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್!

Share the Article

ವಿದ್ಯಾರ್ಥಿ ಜೀವನ ಎಂಬುದು ಪುಸ್ತಕದ ಓದು ಮಾತ್ರವಲ್ಲದೆ ಹೊರಗಿನ ಪ್ರಪಂಚದ ಬಗ್ಗೆಯೂ ತಿಳಿಯುವುದು ಮುಖ್ಯ. ಮಕ್ಕಳಲ್ಲಿ ಶೈಕ್ಷಣಿಕ ಜೀವನ ರೂಪಿಸಿಕೊಳ್ಳಲು ಮಾರ್ಗದರ್ಶನ ಸಿಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.

ಹೌದು. ಪ್ರೌಢಶಾಲೆಗಳಲ್ಲಿ 8 ನೇ ತರಗತಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಅಕ್ಟೋಬರ್ ನಲ್ಲಿ ಕರ್ನಾಟಕ ದರ್ಶನ ಪ್ರವಾಸವನ್ನು ಆಯೋಜಿಸಿದೆ.

ಸರ್ಕಾರಿ ಪ್ರೌಢಶಾಲೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಡಗದ ವಿದ್ಯಾರ್ಥಿಗಳಿಗೆ ಕರ್ನಾಟಕ ದರ್ಶನ ಪ್ರವಾಸವನ್ನು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು ವತಿಯಿಂದ ಆಯೋಜಿಸಲಾಗಿದೆ. ಕರ್ನಾಟಕ ದರ್ಶನ ಉಚಿತ ಶೈಕ್ಷಣಿಕ ಪ್ರವಾಸ ಕಾರ್ಯಕ್ರಮವನ್ನು 2022-23 ನೇ ಸಾಲಿನಲ್ಲಿ ಎಸ್. ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ರಾಜ್ಯದ ಶೈಕ್ಷಣಿಕ ಮತ್ತು ಐತಿಹಾಸಿಕ ಸ್ಥಳಗಳಿಗೆ ಭೇಟಿ ಸ್ಥಳ ವೀಕ್ಷಣೆ ಮಾಡಲು ಅವಕಾಶ ಮಾಡಿಕೊಟ್ಟಿದ್ದು, ಅಕ್ಟೋಬರ್ 2022 ರಲ್ಲಿ ಆಯೋಜಿಸಲಾಗುತ್ತಿದೆ.

Leave A Reply