ಇಂದು ಈ ಜಿಲ್ಲೆಯ ಶಾಲೆ, ಕಾಲೇಜಿಗೆ ರಜೆ

Share the Article

ಚಿತ್ರದುರ್ಗದಲ್ಲಿ ಇಂದು ಹಿಂದೂ ಮಹಾಸಭಾ ಗಣಪತಿ ಶೋಭಾಯಾತ್ರೆ ನಡೆಯಲಿದೆ. ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ವತಿಯಿಂದ ಮಹಾಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆ ಚಳ್ಳಕೆರೆ ಗೇಟ್ ನಿಂದ ಚಂದ್ರವಳ್ಳಿ ಕೆರೆಯವರೆಗೆ ನಡೆಯಲಿದೆ.

ಶೋಭಾಯಾತ್ರೆಯಲ್ಲಿ 1.5 ಲಕ್ಷಕ್ಕೂ ಹೆಚ್ಚು ಜನ ಸೇರುವ ಸಾಧ್ಯತೆ ಇದೆ. ಚಿತ್ರದುರ್ಗ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ ಕೈಗೊಳ್ಳಲಾಗಿದೆ. ಹಾಗಾಗಿ, ಚಿತ್ರದುರ್ಗ ನಗರ ವ್ಯಾಪ್ತಿಯ ಶಾಲೆ, ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ.

8 ಕೆ.ಎಸ್.ಆರ್.ಪಿ, ತುಕಡಿ, 8 ಡಿಎಆರ್ ತುಕಡಿ ಸೇರಿದಂತೆ ಒಂದು ಸಾವಿರಕ್ಕೂ ಅಧಿಕ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಚಿತ್ರದುರ್ಗ ಮುಖ್ಯ ರಸ್ತೆಯ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ ಮಾಹಿತಿ ನೀಡಿದ್ದಾರೆ.

Leave A Reply