ಸಹಪಾಠಿಗಳ ಸ್ನಾನದ ವೀಡಿಯೋ ಸೆರೆ ಹಿಡಿದು ಸ್ನೇಹಿತನಿಗೆ ಕಳುಹಿಸಿದ ವಿದ್ಯಾರ್ಥಿನಿ | ಸ್ನೇಹಿತ MMS ಅಪ್ಲೋಡ್ ಮಾಡಿದ, ನಂತರ ಆದದ್ದು ಭಯಾನಕ ಘಟನೆ
ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿನಿಯೊಬ್ಬಳು ತನ್ನ 60 ಸಹಪಾಠಿಗಳು ಸ್ನಾನ ಮಾಡುತ್ತಿದ್ದ ದೃಶ್ಯವನ್ನು ಯಾರಿಗೂ ತಿಳಿಯದ ಹಾಗೇ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದು, ಅಷ್ಟು ಮಾತ್ರವಲ್ಲದೇ, ಅದನ್ನು ತನ್ನ ಹಿಮಾಚಲ ಪ್ರದೇಶದಲ್ಲಿ ವಾಸವಿರುವ ಸ್ನೇಹಿತನಿಗೆ ಕಳುಹಿಸಿದ್ದು, ಆತ ಇದನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ಶಾಕಿಂಗ್ ಘಟನೆಯೊಂದು ನಡೆದಿದೆ.
ಇಂಥದೊಂದು ಘಟನೆ ಚಂಡೀಗಢ ವಿಶ್ವವಿದ್ಯಾಲಯದಲ್ಲಿ ನಡೆದಿದ್ದು, ತಾವು ಸ್ನಾನ ಮಾಡುತ್ತಿರುವ ದೃಶ್ಯದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ತಿಳಿಯುತ್ತಿದ್ದಂತೆ ಕೆಲವು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಕೂಡಾ ಹೇಳಲಾಗಿತ್ತು.
ಆದರೆ ಈ ವಿಚಾರ ಗೊತ್ತಿರದ ವಿದ್ಯಾರ್ಥಿಗಳು ಆರಾಮವಾಗಿಯೇ ಇದ್ದರು. ಆದರೆ ಈ ವಿಚಾರ ತಿಳಿಯುತ್ತಿದ್ದಂತೆಯೇ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೂ ಭಾರೀ ಪ್ರತಿಭಟನೆ ನಡೆಸಿದ್ದಾರೆ. ಇದೀಗ ಪೊಲೀಸರು ತನ್ನ ಸ್ನೇಹಿತನಿಗೆ ಎಂಎಂಎಸ್ ಕಳುಹಿಸಿದ ವಿದ್ಯಾರ್ಥಿನಿಯನ್ನು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಇದನ್ನು ಇಂಟರ್ನೆಟ್ ನಲ್ಲಿ ಅಪ್ಲೋಡ್ ಮಾಡಿದ್ದ ಆರೋಪಿ ಬಂಧನಕ್ಕೂ ಬಲೆ ಬೀಸಿದ್ದಾರೆ.
ಆದರೆ ಈ ವೀಡಿಯೋ ಅಪ್ಲೋಡ್ ಆಯಿತು ಎಂದು ಭಯಗೊಂಡ 8 ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನಿಸಿದ್ದಾಗಿ ವರದಿಯಾಗಿತ್ತು. ಆದರೆ ಈ ಘಟನೆ ಕುರಿತಂತೆ ಪ್ರತಿಕ್ರಿಯಿಸಿರುವ ವಿಶ್ವವಿದ್ಯಾಲಯದ ಅಧಿಕಾರಿಗಳು ಯಾವುದೇ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿಲ್ಲ. ಆದರೆ ಆಘಾತಕ್ಕೊಳಗಾದ ಓರ್ವ ವಿದ್ಯಾರ್ಥಿನಿ ಅಸ್ವಸ್ಥಗೊಂಡಿದ್ದು ಆಕೆಯನ್ನು ಆಸ್ಪತ್ರೆಗೆ
ದಾಖಲಿಸಲಾಗಿದೆ ಎಂದಿದ್ದಾರೆ. ಅಲ್ಲದೆ ಘಟನೆ ಕುರಿತು
ಸಂಪೂರ್ಣ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದು, ವಿದ್ಯಾರ್ಥಿಗಳು ಶಾಂತಿ ಕಾಪಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಈ ಕುರಿತು ಪಂಜಾಬ್ ಶಾಲಾ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್ ಮಾತನಾಡಿ, ಪ್ರಕರಣದ ತನಿಖೆ ನಡೆಯುತ್ತಿದೆ. ವಿದ್ಯಾರ್ಥಿಗಳು ಸಂಯಮ ಕಾಪಾಡಬೇಕು ಎಂದು ಮನವಿ ಮಾಡಿದರು. ತಪ್ಪು ಮಾಡಿದವರನ್ನು ಬಿಡುವ ಪ್ರಶ್ನೆಯೇ ಇಲ್ಲ. ಇದು ತುಂಬಾ ಸೂಕ್ಷ್ಮ ವಿಷಯ. ಎಲ್ಲಕ್ಕಿಂತ ಹೆಚ್ಚಾಗಿ ನಮ್ಮ ಹೆಣ್ಣು ಮಕ್ಕಳು ಮತ್ತು ಸಹೋದರಿಯರ ಗೌರವದ ಪ್ರಶ್ನೆಯಾಗಿದೆ. ಈ ವಿಚಾರದಲ್ಲಿ ನಾವು ಹಾಗೂ ಮಾಧ್ಯಮದವರೂ ಕೂಡಾ ಎಚ್ಚರಿಕೆ ವಹಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.