ಸಿನಿಮಾ ರಂಗದಲ್ಲಿ ಮುಂದುವರಿದ ಆತ್ಮಹತ್ಯೆ ಸರಣಿ !! ಯುವ ನಟಿಯ ಸಾವು-ಹಲವು ಅನುಮಾನ!!

ಚೆನ್ನೈ: ಇತ್ತೀಚಿನ ದಿನಗಳಲ್ಲಿ ಸಿನಿಮಾ ರಂಗದಲ್ಲಿ ಸರಣಿ ಆತ್ಮಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಯುವ ನಟಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತರನ್ನು ತಮಿಳು ಚಿತ್ರ ನಟಿ ದೀಪ ಅಲಿಯಾಸ್ ಪೌಲಿನ್ ಎಂದು ಗುರುತಿಸಲಾಗಿದ್ದು, ಚೆನ್ನೈ ನ ವಿರುಗಂಬಾಕ್ಕಂನಲ್ಲಿರುವ ನಿವಾಸದಲ್ಲೇ ನೇಣಿಗೆ ಶರಣಾಗಿದ್ದಾರೆ. ತಮಿಳಿನ ಹಲವು ಚಿತ್ರಗಳಲ್ಲಿ ನಟಿಸಿರುವ ದೀಪಾ, ತುಪ್ಪರಿವಾಲನ್ ಚಿತ್ರದಲ್ಲಿ ಹೆಚ್ಚು ಸದ್ದು ಮಾಡಿದ್ದಲ್ಲದೇ, ಆ ಚಿತ್ರದ ಮೂಲಕವೇ ಹೆಚ್ಚು ಜನಪ್ರಿಯರಾಗಿದ್ದರು.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಆತ್ಮೀಯರ ಪ್ರಕಾರ ದೀಪಾ ಕಳೆದ ಕೆಲ ದಿನಗಳಿಂದ ಮಾನಸಿಕ ಒತ್ತಡದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅಲ್ಲದೇ ಮತ್ತೊಂದೆಡೆ ಪ್ರೇಮ ವೈಫಲ್ಯವೇ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Leave A Reply

Your email address will not be published.