ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಆರಂಭವಾಗಲಿದೆ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಬೋಧನೆ – ಬಿ.ಸಿ.ನಾಗೇಶ್

ಬೆಂಗಳೂರು:ವಿಧಾನ ಪರಿಷತ್ ನಲ್ಲಿ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಬೋಧನೆ ಕುರಿತಂತೆ ವಿಚಾರ ಪ್ರಸ್ತಾಪವಾದಗ, ಈ ಕುರಿತು ಶಿಕ್ಷಣ ಸಚಿವರು ಸ್ಪಷ್ಟನೆ ನೀಡಿದ್ದಾರೆ.

ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಭಗವದ್ಗೀತೆ ಬೋಧನೆ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh) ತಿಳಿಸಿದರು.

ವಿಧಾನ ಪರಿಷತ್​ನಲ್ಲಿ ಈ ವಿಚಾರವನ್ನು ಸದಸ್ಯ ಎಂ.ಕೆ.ಪ್ರಾಣೇಶ್ (MK Pranesh) ಪ್ರಸ್ತಾಪಿಸಿದರು. ಭಗವದ್ಗೀತೆ ಬೋಧನೆ ಪ್ರಸ್ತಾಪ ಇಲ್ಲ ಎಂದು ಸರ್ಕಾರ ಹೇಳುತ್ತಿದೆ. ಈ ಹಿಂದೆ ಭಗವದ್ಗೀತೆ ಬೋಧನೆಗೆ ಸಮಿತಿ ರಚಿಸುವ ಬಗ್ಗೆ ಹೇಳಲಾಗಿತ್ತು. ಆದರೆ ಈಗ ಬೇರೆಯೇ ಹೇಳಿಕೆ ಹೊರಬಂದಿದೆ. ಭಗವದ್ಗೀತೆ ಬೋಧಿಸಲು ಸರ್ಕಾರಕ್ಕೆ ಮುಜುಗರವೇನಾದರೂ ಇದೆಯೇ? ಮೊದಲು ಇದ್ದ ಆಸಕ್ತಿ ಈಗ ಯಾಕೆ ಇಲ್ಲ ಎಂದು ಕೇಳಿದರು.

ಈ ವೇಳೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಉತ್ತರಿಸಿ, ಈ ವರ್ಷದಿಂದಲೇ ನೈತಿಕ ಶಿಕ್ಷಣ ವಿಭಾಗದಲ್ಲಿ ಭಗವದ್ಗೀತೆ ಬೋಧಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಸಮಿತಿ ರಚನೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.

Leave A Reply

Your email address will not be published.